ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆ ಮೂಲಭೂತ ಹಕ್ಕು: ನಾಗಲಕ್ಷ್ಮಿ ಚೌದರಿ
ಉಡುಪಿ, 25 ಜೂನ್ (ಹಿ.ಸ.): ಆ್ಯಂಕರ್: ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ಪೋಶ್ (ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ, ನಿಷೇಧ ಮತ್ತು ಪರಿಹಾರ) ಅಧಿನಿಯಮ–2013 ಕುರಿತ ತರಬೇತಿ ಹಾಗೂ ಅರಿವು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ
ನಾಗಲಕ್ಷ್ಮಿ ಚೌದರಿ


ಉಡುಪಿ, 25 ಜೂನ್ (ಹಿ.ಸ.):

ಆ್ಯಂಕರ್:

ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾದ ಪೋಶ್ (ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆ, ನಿಷೇಧ ಮತ್ತು ಪರಿಹಾರ) ಅಧಿನಿಯಮ–2013 ಕುರಿತ ತರಬೇತಿ ಹಾಗೂ ಅರಿವು ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆಲಸದ ಸ್ಥಳದಲ್ಲಿ ಪ್ರತಿಯೊಬ್ಬ ಮಹಿಳೆಗೂ ಸುರಕ್ಷಿತ, ಗೌರವಾನ್ವಿತ ಹಾಗೂ ಸಮಾನ ಅವಕಾಶಗಳು ದೊರೆಯುವುದು ಕೇವಲ ಸೌಲಭ್ಯವಲ್ಲ, ಅದು ಅವರ ಮೂಲಭೂತ ಹಕ್ಕು ಎಂದು ಹೇಳಿದರು.

ಮಹಿಳೆಯರು ಯಾವುದೇ ಭಯ ಅಥವಾ ಒತ್ತಡವಿಲ್ಲದೆ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಬೇಕಾದರೆ ಅವರಿಗೆ ಕಾನೂನಿನ ಅರಿವು ಮತ್ತು ಸೂಕ್ತ ರಕ್ಷಣೆ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಪೋಶ್ ಅಧಿನಿಯಮದಡಿ ಲಭ್ಯವಿರುವ ಕಾನೂನು ರಕ್ಷಣೆ, ಹಕ್ಕುಗಳು ಹಾಗೂ ದೂರು ಪರಿಹಾರ ವ್ಯವಸ್ಥೆಗಳ ಕುರಿತು ಪ್ರತಿಯೊಬ್ಬರೂ ಜಾಗೃತರಾಗಬೇಕು ಎಂದು ಅವರು ತಿಳಿಸಿದರು.

ಕೆಲಸದ ಸ್ಥಳಗಳಲ್ಲಿ ಮಹಿಳೆಯರ ವಿರುದ್ಧದ ಲೈಂಗಿಕ ಕಿರುಕುಳ ತಡೆಗಟ್ಟಲು ಸಂಸ್ಥೆಗಳು ಆಂತರಿಕ ದೂರು ಸಮಿತಿಗಳನ್ನು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಅರಿವು ಹೊಂದಿ, ಯಾವುದೇ ರೀತಿಯ ಕಿರುಕುಳ ಎದುರಾದರೆ ನಿರ್ಭಯವಾಗಿ ದೂರು ಸಲ್ಲಿಸಬೇಕು ಎಂದು ಕರೆ ನೀಡಿದರು.

ಮಹಿಳೆಯರ ಸುರಕ್ಷತೆ, ಗೌರವ ಹಾಗೂ ಹಕ್ಕುಗಳ ರಕ್ಷಣೆಗೆ ಮಹಿಳಾ ಆಯೋಗ ಸದಾ ಬದ್ಧವಾಗಿದ್ದು, ಮಹಿಳೆಯರ ಪರವಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ನಾಗಲಕ್ಷ್ಮಿ ಚೌದರಿ ಹೇಳಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಹಿಳಾ ಪ್ರತಿನಿಧಿಗಳು ಭಾಗವಹಿಸಿ, ಪೋಶ್ ಅಧಿನಿಯಮದ ಮಹತ್ವ ಮತ್ತು ಪರಿಣಾಮಕಾರಿ ಅನುಷ್ಠಾನದ ಕುರಿತು ಮಾಹಿತಿ ಪಡೆದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande