ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಆಗಮನ
ಹೆಲಿಪ್ಯಾಡ್
Telangana Chief Minister A. Revanth Reddy


ಕೊಪ್ಪಳ, 25 ಜೂನ್ (ಹಿ.ಸ.) :

ಆ್ಯಂಕರ್ : ತುಂಗಭದ್ರಾ ಅಣೆಕಟ್ಟಿನ ಹೊಸ ಕ್ರಸ್ಟ್ ಗೇಟ್ ಗಳ ಉದ್ಘಾಟನಾ ಸಮಾರಂಭಕ್ಕೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹಾಗೂ ನೀರಾವರಿ ಇಲಾಖೆ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಅವರು ಆಗಮಿಸಿದ್ದಾರೆ.

ಮುನಿರಾಬಾದ್ ರಿಸರ್ವ್ ಪೊಲೀಸ್ ಕವಾಯತು ಮೈದಾನದಲ್ಲಿನ ಹೆಲಿಪ್ಯಾಡ್ ಗೆ ಬಂದಿಳಿದ ತೆಲಂಗಾಣ ಮುಖ್ಯಮಂತ್ರಿಗೆ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.

ಈ ವೇಳೆ ಶಾಸಕ ಬಸವರಾಜ ರಾಯರೆಡ್ಡಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande