ವೆನೆಜುವೆಲಾ ಭೂಕಂಪ ; ಪ್ರಧಾನಿ ಮೋದಿ ಸಂತಾಪ, ನೆರವಿನ ಭರವಸೆ
ನವದೆಹಲಿ, 25 ಜೂನ್ (ಹಿ.ಸ.) : ಆ್ಯಂಕರ್ : ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ವಿನಾಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಭಾರತ ಸರ್ಕಾರ ಮತ್ತು ದೇಶದ ಜನರ ಪರವ
Pm file photo


ನವದೆಹಲಿ, 25 ಜೂನ್ (ಹಿ.ಸ.) :

ಆ್ಯಂಕರ್ : ವೆನೆಜುವೆಲಾದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ವಿನಾಶಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಭಾರತ ಸರ್ಕಾರ ಮತ್ತು ದೇಶದ ಜನರ ಪರವಾಗಿ ವೆನೆಜುವೆಲಾ ಸರ್ಕಾರ ಹಾಗೂ ಅಲ್ಲಿನ ನಾಗರಿಕರಿಗೆ ಸಾಂತ್ವನ ತಿಳಿಸಿದ್ದಾರೆ.

ವೆನೆಜುವೆಲಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪಗಳಿಂದ ಉಂಟಾದ ವಿನಾಶದಿಂದ ತೀವ್ರ ದುಃಖವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ಭಾರತದ ಜನರ ಪರವಾಗಿ ಹೃತ್ಪೂರ್ವಕ ಸಂತಾಪಗಳನ್ನು ಸಲ್ಲಿಸುತ್ತೇನೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತರೊಂದಿಗೆ ಭಾರತ ಸಂಪೂರ್ಣ ಐಕ್ಯತೆ ವ್ಯಕ್ತಪಡಿಸುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಅಲ್ಲದೆ, ಅಗತ್ಯವಿರುವ ಎಲ್ಲ ರೀತಿಯ ನೆರವು ಮತ್ತು ಸಹಕಾರ ನೀಡಲು ಭಾರತ ಸಿದ್ಧವಾಗಿದೆ ಎಂಬ ಭರವಸೆಯನ್ನೂ ಪ್ರಧಾನಿ ತಮ್ಮ ಸಂದೇಶದಲ್ಲಿ ವ್ಯಕ್ತಪಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande