ವಿಬಿಜಿ ರಾಮ್ ಜಿ ಕಾಯ್ದೆ ಕುರಿತು ತರಬೇತಿ ಕಾರ್ಯಾಗಾರ
ಧಾರವಾಡ, 25 ಜೂನ್ (ಹಿ.ಸ.): ಆ್ಯಂಕರ್: ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ–2025 (ವಿ.ಬಿ.-ಜಿ ರಾಮ್-ಜಿ) ಕುರಿತು ಧಾರವಾಡ ಜಿಲ್ಲೆಯ ಕಲಘಟಗಿ, ಧಾರವಾಡ, ಹುಬ್ಬಳ್ಳಿ ಹಾಗೂ ನವಲಗುಂದ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಗುರುವಾರ ತರಬೇತಿ ಕಾರ್ಯಕ್ರಮಗಳ
Workshop


ಧಾರವಾಡ, 25 ಜೂನ್ (ಹಿ.ಸ.):

ಆ್ಯಂಕರ್:

ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ) ಕಾಯ್ದೆ–2025 (ವಿ.ಬಿ.-ಜಿ ರಾಮ್-ಜಿ) ಕುರಿತು ಧಾರವಾಡ ಜಿಲ್ಲೆಯ ಕಲಘಟಗಿ, ಧಾರವಾಡ, ಹುಬ್ಬಳ್ಳಿ ಹಾಗೂ ನವಲಗುಂದ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಗುರುವಾರ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ತರಬೇತುದಾರರು ಕಾಯ್ದೆಯ ಉದ್ದೇಶಗಳು, ಅನುಷ್ಠಾನ ಕ್ರಮಗಳು, ಯೋಜನೆಯ ಪ್ರಮುಖ ಅಂಶಗಳು ಹಾಗೂ ಗ್ರಾಮೀಣ ಮಟ್ಟದಲ್ಲಿ ಪರಿಣಾಮಕಾರಿ ಜಾರಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ತರಬೇತಿಯಲ್ಲಿ ವಿವಿಧ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾಮೀಣ ಮತ್ತು ಉದ್ಯೋಗ), ಅನುಷ್ಠಾನ ಅಧಿಕಾರಿಗಳು, ಗ್ರಾಮ ಪಂಚಾಯತ್ಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕಂಪ್ಯೂಟರ್ ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿ ಭಾಗವಹಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳು ಮತ್ತು ಜೀವನೋಪಾಯ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಲಾಯಿತು. ಯೋಜನೆಯ ಅನುಷ್ಠಾನದಲ್ಲಿ ಪಾರದರ್ಶಕತೆ, ಫಲಾನುಭವಿಗಳ ಆಯ್ಕೆ, ದಾಖಲೆ ನಿರ್ವಹಣೆ ಮತ್ತು ತಾಂತ್ರಿಕ ವ್ಯವಸ್ಥೆಗಳ ಬಳಕೆಯ ಕುರಿತು ವಿಶೇಷ ತರಬೇತಿ ನೀಡಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande