ಮಾದಕ ದ್ರವ್ಯ ವಿರೋಧಿ ಹೋರಾಟಗಾರರಿಗೆ ಅಮಿತ್ ಶಾ ಶುಭಾಶಯ
ನವದೆಹಲಿ, 26 ಜೂನ್ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದಾದ್ಯಂತ ಮಾದಕ ದ್ರವ್ಯಗಳ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟ
ಅಮಿತ್ ಶಾ


ನವದೆಹಲಿ, 26 ಜೂನ್ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದಾದ್ಯಂತ ಮಾದಕ ದ್ರವ್ಯಗಳ ವಿರುದ್ಧ ಹೋರಾಟ ನಡೆಸುತ್ತಿರುವ ಎಲ್ಲರಿಗೂ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು ಮಾದಕ ದ್ರವ್ಯ ದುರುಪಯೋಗ ಎಂಬ ಜಾಗತಿಕ ಸವಾಲಿನ ವಿರುದ್ಧ ಅತ್ಯಂತ ದೃಢವಾದ ಹೋರಾಟವನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಮಾದಕ ದ್ರವ್ಯ ಜಾಲಗಳನ್ನು ನಿರ್ದಾಕ್ಷಿಣ್ಯವಾಗಿ ನಿರ್ಮೂಲನೆ ಮಾಡುವುದರ ಜೊತೆಗೆ, ಮಾದಕ ವ್ಯಸನಕ್ಕೆ ಒಳಗಾದವರಿಗೆ ಅಗತ್ಯವಾದ ಕಾಳಜಿ ಮತ್ತು ಸಹಾನುಭೂತಿಯೊಂದಿಗೆ ಪುನರ್ವಸತಿ ಕಲ್ಪಿಸುವ ಕಾರ್ಯಕ್ಕೂ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಶಾ ತಿಳಿಸಿದ್ದಾರೆ.

ಅಲ್ಲದೆ, ಈ ದಿನವು ದೇಶದ ಯುವಜನರನ್ನು ಮಾದಕ ದ್ರವ್ಯಗಳಿಂದ ರಕ್ಷಿಸುವ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಿ ಎಂದು ಅವರು ಆಶಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande