
ಬೆಂಗಳೂರು, 26 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘ (ಎಫ್ಕೆಸಿಸಿಐ)ನ ಅಧ್ಯಕ್ಷರಾಗಿರುವ ಶ್ರೀಮತಿ ಉಮಾರೆಡ್ಡಿ ಅವರ ನೇತೃತ್ವದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಜೊತೆ ಕರ್ನಾಟಕದ ಕೈಗಾರಿಕಾ ಅಭಿವೃದ್ಧಿ ಮತ್ತು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಂವಾದ ನಡೆಯಿತು.
ಈ ಸಂವಾದದಲ್ಲಿ ಪಾಲ್ಗೊಂಡಿದ್ದ ಬಳ್ಳಾರಿ ಜಿಲ್ಲಾ ಕೈಗಾರಿಕಾ ಸಂಘದ ಪ್ರತಿನಿಧಿ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಹಾಗೂ ಹ್ಯಾಲೀಸ್ ಬ್ಲ್ಯೂನ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಶಿವಮೂರ್ತಿ ಅವರು, ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿ ಕುರಿತು ಮಾತನಾಡಿ, ಜಿಲ್ಲೆಯ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದ್ದಾರೆ.
ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ. ಕಾವೇರಿ ಅವರು, ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ ಮನವಿಯನ್ನು, ಪರಿಶೀಲಿಸಿದ್ದು, ತಕ್ಷಣವೇ ಈ ಕುರಿತು ಗಮನ ನೀಡುವುದಾಗಿ ಭರವಸೆ ನೀಡಿದ್ದಾರೆ.
ಯಶವಂತರಾಜ್ ನಾಗಿರೆಡ್ಡಿ ಮತ್ತು ಕೆ.ಎಂ. ಶಿವಮೂರ್ತಿ ಅವರು, ತಾವು ಸಲ್ಲಿಸಿರುವ ಮನವಿಯಲ್ಲಿ, ಕೈಗಾರಿಕಾ ವಲಯದ ಆಸ್ತಿಗಳಿಗೆ ಇ-ಖಾತೆ ನೀಡುವಲ್ಲಿ ವಿನಾಕಾರಣ ಆಗುತ್ತಿರುವ ವಿಳಂಬ. ನಗರ ಪಾಲಿಕೆ ಆಸ್ತಿ ತೆರಿಗೆ ತೆರಿಗೆ ನಿಗಧಿ ಮಾಡುವಲ್ಲಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ತೋರುತ್ತಿರುವ ತಾರತಮ್ಯ ಇನ್ನಿತರೆಗಳನ್ನು ಪ್ರಸ್ತಾಪ ಮಾಡಿರುವುದಾಗಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್