
ಶಿವಮೊಗ್ಗ, 26 ಜೂನ್ (ಹಿ.ಸ.) :
ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದ 2026-27ನೇ ಸಾಲಿಗೆ 11ನೇ ತರಗತಿಗೆ ವಾಣಿಜ್ಯ ವಿಭಾಗಕ್ಕೆ ಖಾಲಿ ಇರುವ ಸೀಟುಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
2025-26 ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. ಹತ್ತನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡವಾರು 50 ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಯು 01.06.2009 ರಿಂದ 31.7.2011 ರ ದಿನಾಂಕದೊಳಗೆ ಜನಿಸಿರಬೇಕು.
ಅರ್ಹ ಆಸಕ್ತ ವಿದ್ಯಾರ್ಥಿ/ ವಿದ್ಯಾರ್ಥಿನಿಯರು ವಿದ್ಯಾಲಯದ ಕಾರ್ಯಾಲಯಕ್ಕೆ ಜೂ. 30 ರ ಒಳಗಾಗಿ ಅರ್ಜಿಯನ್ನು ಎಲ್ಲ ದಾಖಲಾತಿಗಳೊಂದಿಗೆ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.