ಡಾಲರ್ಸ್ ಕಾಲೋನಿಯಲ್ಲಿ ಪರಿಸರ ಜಾಗೃತಿ ಪಾದಯಾತ್ರೆ
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ಸಂಜಯನಗರದ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣದ ಮಹತ್ವ ಸಾರುವ ಉದ್ದೇಶದಿಂದ ಶುಕ್ರವಾರ ಪರಿಸರ ಜಾಗೃತಿ ಪಾದಯಾತ್ರೆ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇ
ಡಾಲರ್ಸ್ ಕಾಲೋನಿಯಲ್ಲಿ ಪರಿಸರ ಜಾಗೃತಿ ಪಾದಯಾತ್ರೆ


ಬೆಂಗಳೂರು, 26 ಜೂನ್ (ಹಿ.ಸ.) :

ಆ್ಯಂಕರ್ : ಸಂಜಯನಗರದ ಪ್ರತಿಷ್ಠಿತ ಡಾಲರ್ಸ್ ಕಾಲೋನಿಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣದ ಮಹತ್ವ ಸಾರುವ ಉದ್ದೇಶದಿಂದ ಶುಕ್ರವಾರ ಪರಿಸರ ಜಾಗೃತಿ ಪಾದಯಾತ್ರೆ ಹಾಗೂ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಮಾಜಿ ಸಚಿವ ಬಿ.ಎಲ್. ಶಂಕರ್, ಹೆಬ್ಬಾಳ ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಪರಿಷತ್ನ ಮಾಜಿ ಸಚೇತಕ ಡಾ. ವೈ.ಎ. ನಾರಾಯಣಸ್ವಾಮಿ, ಮಾಜಿ ಉಪ ಮೇಯರ್ ಆನಂದ್, ದೂರದರ್ಶನದ 'ಥಟ್ ಅಂತ ಹೇಳಿ' ಕಾರ್ಯಕ್ರಮದ ಖ್ಯಾತಿಯ ಡಾ. ನಾ. ಸೋಮೇಶ್ವರ, ಗೋಪಿ, ಭಾರತ ರಕ್ಷಣಾ ವೇದಿಕೆ ಅಧ್ಯಕ್ಷ ಕೃಷ್ಣೇಗೌಡ, ಕಾಂಗ್ರೆಸ್ ನಾಯಕ ಗಿರಿ, ಸುನೀತಾ ಮಂಜುನಾಥ್, ಶಿವಶಂಕರ್, ಡಾಲರ್ಸ್ ಕಾಲೋನಿ ನಡಿಗೆದಾರರ ಸಂಘದ ಅಧ್ಯಕ್ಷ ಸಿ. ಮಧು, ಮಂಜುನಾಥ್, ಡೈರಿ ರಾಜಣ್ಣ, ಲಕ್ಷ್ಮೇಗೌಡ, ಎಸ್.ಎಸ್. ಪಾಟೀಲ್, ವಿವೇಕಾನಂದ ಶೆಟ್ಟಿ, ಚಂದ್ರಶೇಖರ್ ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.

ಪರಿಸರ ಸಂರಕ್ಷಣೆಯ ಸಂದೇಶ ಸಾರುತ್ತಾ ಡಾಲರ್ಸ್ ಕಾಲೋನಿಯ ಪ್ರಮುಖ ರಸ್ತೆಗಳಲ್ಲಿ ಪಾದಯಾತ್ರೆ ನಡೆಸಿದ ಬಳಿಕ, ಬುಲ್ಲೇವಾರ್ಡ್ ಪಾರ್ಕ್ನಲ್ಲಿ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದ್ದು, ನಗರದಲ್ಲಿ ಹಸಿರು ಪರಿಸರ ಉಳಿಸಿ ಬೆಳೆಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳ ಪೋಷಣೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು ಹಾಗೂ ಪರಿಸರ ಪ್ರೇಮಿಗಳು ಉತ್ಸಾಹದಿಂದ ಪಾಲ್ಗೊಂಡು ಹಸಿರು ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande