ಬಿಜ್ಜರಗಿಯ ಕಿರಣಗೌಡ ಬಿರಾದಾರರಿಗೆ NSUI ವಿಜಯಪುರ ಜಿಲ್ಲಾಧ್ಯಕ್ಷ ಪಟ್ಟ : ಸಚಿವ ಎಂ.ಬಿ. ಪಾಟೀಲರಿಂದ ಶುಭಾಶಯ
ವಿಜಯಪುರ, 26 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಬಿಜ್ಜರಗಿ ಗ್ರಾಮದ ಯುವ ನಾಯಕ ಶ್ರೀ ಕಿರಣಗೌಡ ಎಸ್. ಬಿರಾದಾರ ಅವರು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನೂತನ ಜವಾಬ್ದಾರಿ ಸ್ವೀಕರಿಸಿದ ಹಿನ್ನೆಲೆಯಲ್ಲಿ
ಶುಭಾಶಯ


ವಿಜಯಪುರ, 26 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ಮತಕ್ಷೇತ್ರದ ಬಿಜ್ಜರಗಿ ಗ್ರಾಮದ ಯುವ ನಾಯಕ ಶ್ರೀ ಕಿರಣಗೌಡ ಎಸ್. ಬಿರಾದಾರ ಅವರು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI)ದ ವಿಜಯಪುರ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನೂತನ ಜವಾಬ್ದಾರಿ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕಿರಣಗೌಡ ಬಿರಾದಾರ ಅವರು ತಮ್ಮ ಸಂಗಡಿಗರೊಂದಿಗೆ ಸಚಿವರಾದ ಎಂ.ಬಿ. ಪಾಟೀಲ ಅವರನ್ನು ಭೇಟಿ ಮಾಡಿ ತಮ್ಮ ಸಂತಸವನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಚಿವರು ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ಸಂಘಟನಾ ಕಾರ್ಯಗಳಿಗೆ ಶುಭ ಹಾರೈಸಿದರು.

ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸುವುದು, ಅವರ ಹಕ್ಕುಗಳಿಗಾಗಿ ಧ್ವನಿಯಾಗುವುದು ಹಾಗೂ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವ ಜವಾಬ್ದಾರಿ ನೂತನ ಜಿಲ್ಲಾಧ್ಯಕ್ಷರ ಮೇಲಿದೆ ಎಂದು ಸಚಿವ ಎಂ.ಬಿ. ಪಾಟೀಲ ಹೇಳಿದರು.

NSUI ಸಂಘಟನೆಯು ವಿದ್ಯಾರ್ಥಿಗಳ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಘಿಕ ಹಿತಾಸಕ್ತಿಗಳಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಕಿರಣಗೌಡ ಬಿರಾದಾರ ಅವರ ನಾಯಕತ್ವದಲ್ಲಿ ವಿಜಯಪುರ ಜಿಲ್ಲೆಯ ಸಂಘಟನೆ ಮತ್ತಷ್ಟು ಚೈತನ್ಯದಿಂದ ಬೆಳೆಯಲಿ ಎಂದು ಅವರು ಹಾರೈಸಿದರು.

ಈ ಸಂದರ್ಭದಲ್ಲಿ NSUI ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದು, ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande