ಕೋಟೆ ಗೋಡೆ ಬಳಿಯ ರಾಜಕಾಲುವೆ ಸ್ವಚ್ಛತಾ ಕಾರ್ಯಕ್ಕೆ ಸಚಿವ ಎಂ.ಬಿ. ಪಾಟೀಲ ಪರಿಶೀಲನೆ
ವಿಜಯಪುರ, 26 ಜೂನ್ (ಹಿ.ಸ.) : ಆಂಕರ್ : ವಿಜಯಪುರ ನಗರದ ಶಿವಾಜಿ ವೃತ್ತದ ಸಮೀಪ ಕೋಟೆ ಗೋಡೆಗೆ ಹೊಂದಿಕೊಂಡಿರುವ ರಾಜಕಾಲುವೆ ಸ್ವಚ್ಛತಾ ಕಾರ್ಯಕ್ಕೆ ಚುರುಕು ನೀಡಲಾಗಿದ್ದು, ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು. ಮಹಾನಗರ ಪಾಲಿಕೆ
Kote


ವಿಜಯಪುರ, 26 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ನಗರದ ಶಿವಾಜಿ ವೃತ್ತದ ಸಮೀಪ ಕೋಟೆ ಗೋಡೆಗೆ ಹೊಂದಿಕೊಂಡಿರುವ ರಾಜಕಾಲುವೆ ಸ್ವಚ್ಛತಾ ಕಾರ್ಯಕ್ಕೆ ಚುರುಕು ನೀಡಲಾಗಿದ್ದು, ಉಸ್ತುವಾರಿ ಸಚಿವರಾದ ಎಂ.ಬಿ. ಪಾಟೀಲ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಮಹಾನಗರ ಪಾಲಿಕೆಯ ವತಿಯಿಂದ ಕೈಗೊಳ್ಳಲಾಗುತ್ತಿರುವ ರಾಜಕಾಲುವೆ ಸ್ವಚ್ಛತಾ ಕಾರ್ಯವನ್ನು ವೀಕ್ಷಿಸಿದ ಸಚಿವರು, ನಗರದ ಸ್ವಚ್ಛತೆ, ಮಳೆನೀರು ಸರಾಗ ಹರಿವು ಹಾಗೂ ಐತಿಹಾಸಿಕ ಕೋಟೆ ಪ್ರದೇಶದ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಳೆಗಾಲದ ಸಂದರ್ಭದಲ್ಲಿ ರಾಜಕಾಲುವೆಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ನಿಯಮಿತವಾಗಿ ಸ್ವಚ್ಛತಾ ಕಾರ್ಯ ನಡೆಸಬೇಕು ಎಂದು ಅವರು ಹೇಳಿದರು.

ನಗರದ ಐತಿಹಾಸಿಕ ಕೋಟೆಗೋಡೆಗಳ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿ ಹಾಗೂ ಸಂರಕ್ಷಣೆಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕೋಟೆ ಪ್ರದೇಶದ ಸೌಂದರ್ಯ ಹೆಚ್ಚಿಸುವ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ., ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ, ಮಹಾಪೌರ ಎಂ.ಎಸ್. ಕರಡಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಂಗಾಧರ್ ಸಂಬಣ್ಣಿ, ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ರಾಹುಲ್ ಜಾದವ, ರಾಜಶೇಖರ ಮಗೀಮಠ ಸೇರಿದಂತೆ ಅಧಿಕಾರಿಗಳು, ಪಾಲಿಕೆ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande