
ಬೆಂಗಳೂರು, 26 ಜೂನ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಪಿಸಿಎ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಜೂನ್ 27ರಂದು (ಶನಿವಾರ) ಆಯೋಜಿಸಲಾಗಿದೆ.
ಕಾಫಿ ಬೋರ್ಡ್, ಕೆಂಪಾಪುರದಲ್ಲಿರುವ ನಂದನ ಕ್ಲಿನಿಕ್ ಹಾಗೂ ಫಿಸಿಯೋಥೆರಪಿ ಸೆಂಟರ್ನಲ್ಲಿ ಬೆಳಿಗ್ಗೆ 7.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ, ವೈದ್ಯರ ಸಲಹೆ ಹಾಗೂ ಅಗತ್ಯ ಆರೋಗ್ಯ ಮಾರ್ಗದರ್ಶನ ನೀಡಲಾಗುತ್ತದೆ.
ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಪಿಸಿಎ ಟ್ರಸ್ಟ್ ಮನವಿ ಮಾಡಿದೆ.
ಪಿಸಿಎ ಟ್ರಸ್ಟ್ನ ಸಾಮಾಜಿಕ ಸೇವೆಯ ಭಾಗವಾಗಿ ಆಯೋಜಿಸಲಾಗುತ್ತಿರುವ ಈ ಆರೋಗ್ಯ ಶಿಬಿರವು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದು ಟ್ರಸ್ಟ್ ತಿಳಿಸಿದೆ.
ಪಿಸಿಎ ಟ್ರಸ್ಟ್ನ ರುದ್ರಮುನಿ ಎಸ್. ಅವರು, ಆರೋಗ್ಯವೇ ಜೀವನದ ಅಮೂಲ್ಯ ಸಂಪತ್ತು. ಆದ್ದರಿಂದ ಸಾರ್ವಜನಿಕರು ಈ ಉಚಿತ ಆರೋಗ್ಯ ಶಿಬಿರದಲ್ಲಿ ತಪ್ಪದೇ ಭಾಗವಹಿಸಿ ವೈದ್ಯರ ಸಲಹೆ ಹಾಗೂ ತಪಾಸಣೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.