
ನವದೆಹಲಿ, 26 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ–2020)ಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಅವರು ಸಲ್ಲಿಸುತ್ತಿರುವ ಕೊಡುಗೆಯನ್ನು ಪ್ರಧಾನಿ ಶ್ಲಾಘಿಸಿದ್ದು, ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ಅವರು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸಮರ್ಥವಾಗಿ ಜಾರಿಗೆ ತರಲು ಪ್ರಶಂಸನೀಯ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಹೊಸ ಶಿಕ್ಷಣ ನೀತಿಯ ಉದ್ದೇಶ ಭಾರತವನ್ನು ಜ್ಞಾನ, ಶಿಕ್ಷಣ ಮತ್ತು ನವೋದ್ಯಮದ ಜಾಗತಿಕ ಕೇಂದ್ರವನ್ನಾಗಿ ರೂಪಿಸುವುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರ ನೇತೃತ್ವದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳಲಾಗುತ್ತಿರುವ ಸುಧಾರಣಾತ್ಮಕ ಕ್ರಮಗಳು ದೇಶದ ಭವಿಷ್ಯದ ಪೀಳಿಗೆಯನ್ನು ಸಬಲಗೊಳಿಸುವುದರ ಜೊತೆಗೆ, ಭಾರತವನ್ನು ಜ್ಞಾನಾಧಾರಿತ ಆರ್ಥಿಕತೆಯತ್ತ ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಪ್ರಧಾನಿ ಅಭಿಪ್ರಾಯಪಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.