ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ : ಮಲ್ಲಿಕಾರ್ಜುನ ಬಾಲದಂಡಿ
ಮೈಸೂರು, 26 ಜೂನ್ (ಹಿ.ಸ.) : ಆ್ಯಂಕರ್ : ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ ಯಂಗ್ ಇಂಡಿಯನ್ಸ್ ವತಿಯಿಂದ ಆಯೋಜಿಸಲಾದ ಯಂಗ್ ಇಂಡಿಯನ್ಸ್ ಪಾರ್ಲಿಮೆಂಟ್ –2026 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ, ಮುಖ್ಯ ಅತಿಥಿಯಾಗಿ ಭಾಗವಹಿಸ
Program


ಮೈಸೂರು, 26 ಜೂನ್ (ಹಿ.ಸ.) :

ಆ್ಯಂಕರ್ : ಕಾನ್ಫೆಡರೇಶನ್ ಆಫ್ ಇಂಡಿಯನ್ ಇಂಡಸ್ಟ್ರಿ ಯಂಗ್ ಇಂಡಿಯನ್ಸ್ ವತಿಯಿಂದ ಆಯೋಜಿಸಲಾದ ಯಂಗ್ ಇಂಡಿಯನ್ಸ್ ಪಾರ್ಲಿಮೆಂಟ್ –2026 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ, ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥಮಾಡಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ಬೆಳೆಯಬೇಕು ಎಂದು ಕರೆ ನೀಡಿದರು. ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು, ಸಮಾಜದತ್ತ ತಮ್ಮ ಹೊಣೆಗಾರಿಕೆಯನ್ನು ಅರಿತು ಕಾರ್ಯನಿರ್ವಹಿಸುವುದು ಹಾಗೂ ಕಾನೂನು ಪಾಲನೆಯ ಮಹತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ತಿಳಿಸಿದರು.

ಇಂತಹ ಯುವಜನರ ಸಂಸತ್ ಮಾದರಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಚರ್ಚೆ, ವಿಚಾರ ವಿನಿಮಯ, ನಾಯಕತ್ವ ಕೌಶಲ್ಯ ಹಾಗೂ ಸಾರ್ವಜನಿಕ ಜೀವನದ ಬಗ್ಗೆ ಅರಿವು ಮೂಡಿಸಲು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಯಂಗ್ ಇಂಡಿಯನ್ಸ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande