ನಾಳೆ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಆಚರಣೆ
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಜೂನ್ 27ರಂದು ಒಕ್ಕಲಿಗರ ಹಿತರಕ್ಷಣಾ ವೇದಿಕೆ ವತಿಯಿಂದ ವಿಜೃಂಭಣೆಯಿಂದ ಹೆಬ್ಬಾಳ ಕೆಂಪಾಪುರದಲ್ಲಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ವೇದಿಕೆಯ ಅಧ್ಯಕ್ಷೆ ರೇಣುಕ ಹೆಗ್ಗಡೆ ತಿಳಿಸಿದ್ದಾರೆ. ಬೆಂಗ
ನಾಳೆ ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಆಚರಣೆ


ಬೆಂಗಳೂರು, 26 ಜೂನ್ (ಹಿ.ಸ.) :

ಆ್ಯಂಕರ್ : ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯನ್ನು ಜೂನ್ 27ರಂದು ಒಕ್ಕಲಿಗರ ಹಿತರಕ್ಷಣಾ ವೇದಿಕೆ ವತಿಯಿಂದ ವಿಜೃಂಭಣೆಯಿಂದ ಹೆಬ್ಬಾಳ ಕೆಂಪಾಪುರದಲ್ಲಿ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ವೇದಿಕೆಯ ಅಧ್ಯಕ್ಷೆ ರೇಣುಕ ಹೆಗ್ಗಡೆ ತಿಳಿಸಿದ್ದಾರೆ.

ಬೆಂಗಳೂರು ನಿರ್ಮಾತೃ ಹಾಗೂ ದೂರದೃಷ್ಟಿಯ ಆಡಳಿತಗಾರರಾಗಿದ್ದ ನಾಡಪ್ರಭು ಕೆಂಪೇಗೌಡರ ಆದರ್ಶ, ಸೇವೆ ಮತ್ತು ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ದಿನಪೂರ್ತಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಗರದ ಅಭಿವೃದ್ಧಿಗೆ ಭದ್ರ ಅಡಿಪಾಯ ಹಾಕಿದ ಕೆಂಪೇಗೌಡರ ಸೇವೆಯನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಯೊಂದಿಗೆ ಆಯ್ದ ರಸ್ತೆಗಳಲ್ಲಿ ಭವ್ಯ ಬೈಕ್ ರ್ಯಾಲಿ ಹಾಗೂ ಮೆರವಣಿಗೆ ನಡೆಯಲಿದೆ. ಅಲ್ಲದೆ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ, ಸಂಜೆ ವೇದಿಕೆ ಕಾರ್ಯಕ್ರಮ ಹಾಗೂ ರಸಮಂಜರಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಾರ್ವಜನಿಕರು, ಯುವಕರು ಹಾಗೂ ಮಹಿಳೆಯರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಧ್ಯಕ್ಷೆ ರೇಣುಕ ಹೆಗ್ಗಡೆ ಹಾಗೂ ವೇದಿಕೆಯ ಎಲ್ಲಾ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande