
ಧಾರವಾಡ, 26 ಜೂನ್ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಾಡಪ್ರಭು ಶ್ರೀ ಕೆಂಪೆಗೌಡ ಜಯಂತಿ ಕಾರ್ಯಕ್ರಮವನ್ನು ನಾಳೆ ಬೆಳಿಗ್ಗೆ 11 ಗಂಟೆಗೆ ನಗರದ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿ ವಹಿಸಲಿದ್ದು, ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಶಾಸಕರು, ಜನಪ್ರತಿನಿಧಿಗಳು, ನಿಗಮ-ಮಂಡಳಿಗಳ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ರಡ್ಡೇರ ಮತ್ತು ಸಿದ್ಧು ಸಿರಸಂಗಿ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಜಿಲ್ಲಾಧಿಕಾರಿ ಸ್ನೇಹಲ್ ಆರ್., ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.