
ನವದೆಹಲಿ, 26 ಜೂನ್ (ಹಿ.ಸ.) :
ಆ್ಯಂಕರ್ : ಮೊಹರಂ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿದ್ದಾರೆ.
ತಮ್ಮ ಸಂದೇಶದಲ್ಲಿ, ಹಜರತ್ ಇಮಾಮ್ ಹುಸೇನ್ (ಎಎಸ್) ಅವರ ತ್ಯಾಗವನ್ನು ಈ ಸಂದರ್ಭದಲ್ಲಿ ಸ್ಮರಿಸಿರುವ ಅವರು, ಮೊಹರಂ ಧೈರ್ಯ, ತ್ಯಾಗ, ಕರುಣೆ ಹಾಗೂ ಸತ್ಯ ಮತ್ತು ನ್ಯಾಯದ ಮೇಲಿನ ಅಚಲ ಬದ್ಧತೆಯ ಮೌಲ್ಯಗಳನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ.
ಈ ಪವಿತ್ರ ಸಂದರ್ಭವು ಸಮಾಜದಲ್ಲಿ ಸೌಹಾರ್ದತೆ, ಶಾಂತಿ ಮತ್ತು ಪರಸ್ಪರ ಗೌರವದ ಬಂಧಗಳನ್ನು ಮತ್ತಷ್ಟು ಬಲಪಡಿಸಲು ಎಲ್ಲರಿಗೂ ಸ್ಫೂರ್ತಿಯಾಗಲಿ ಎಂದು ಉಪರಾಷ್ಟ್ರಪತಿ ತಮ್ಮ ಸಂದೇಶದಲ್ಲಿ ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.