ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿಲು ಪಿಸಿಎ ಚಾರಿಟೇಬಲ್ ಟ್ರಸ್ಟ್ ಮನವಿ
ಬೆಂಗಳೂರು, 26 ಜೂನ್ (ಹಿ.ಸ.) : ಆ್ಯಂಕರ್ : ಪಿಸಿಎ ಚಾರಿಟೇಬಲ್ ಟ್ರಸ್ಟ್ ಸಾರ್ವಜನಿಕರಿಗೆ ಮಹತ್ವದ ಮನವಿ ಮಾಡಿದ್ದು, ಮುಂಬರುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದೆ. ಜೂನ್ 28ರಿಂದ ಜುಲೈ 1, 2026ರವರೆಗೆ ನಡೆಯಲಿರುವ ಈ ವಿಶೇಷ ಲಸಿಕಾ ಅಭ
ಪೋಲಿಯೊ ಅಭಿಯಾನ


ಬೆಂಗಳೂರು, 26 ಜೂನ್ (ಹಿ.ಸ.) :

ಆ್ಯಂಕರ್ : ಪಿಸಿಎ ಚಾರಿಟೇಬಲ್ ಟ್ರಸ್ಟ್ ಸಾರ್ವಜನಿಕರಿಗೆ ಮಹತ್ವದ ಮನವಿ ಮಾಡಿದ್ದು, ಮುಂಬರುವ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದೆ.

ಜೂನ್ 28ರಿಂದ ಜುಲೈ 1, 2026ರವರೆಗೆ ನಡೆಯಲಿರುವ ಈ ವಿಶೇಷ ಲಸಿಕಾ ಅಭಿಯಾನದಲ್ಲಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ ಜೀವ ರಕ್ಷಕ ಪೋಲಿಯೊ ಲಸಿಕೆಯ ಎರಡು ಹನಿಗಳನ್ನು ಕಡ್ಡಾಯವಾಗಿ ಹಾಕಿಸಬೇಕು ಎಂದು ಟ್ರಸ್ಟ್ ಮನವಿ ಮಾಡಿದೆ.

ಈ ಅವಧಿಯಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪೋಲಿಯೊ ಲಸಿಕೆ ನೀಡಲಾಗುತ್ತದೆ. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಮತ್ತು ಪಾಲಕರು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

ಇದಲ್ಲದೆ, ಈ ಮಹತ್ವದ ಸಂದೇಶವನ್ನು ಕುಟುಂಬ ಸದಸ್ಯರು, ಸ್ನೇಹಿತರು, ನೆರೆಹೊರೆಯವರು ಹಾಗೂ ಹಿತೈಷಿಗಳಿಗೆ ತಲುಪಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲೂ ವ್ಯಾಪಕವಾಗಿ ಹಂಚಿಕೊಳ್ಳುವಂತೆ ಪಿಸಿಎ ಚಾರಿಟೇಬಲ್ ಟ್ರಸ್ಟ್ ಮನವಿ ಮಾಡಿದೆ.

ಪೋಲಿಯೊ ಮುಕ್ತ ನಾಳೆಗಾಗಿ ಇಂದು ಎರಡು ಹನಿಗಳು ಎಂಬ ಘೋಷವಾಕ್ಯದೊಂದಿಗೆ ಎಲ್ಲರೂ ಈ ಸಾರ್ವಜನಿಕ ಆರೋಗ್ಯ ಅಭಿಯಾನಕ್ಕೆ ಕೈಜೋಡಿಸುವಂತೆ ಟ್ರಸ್ಟ್ ಕರೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande