
ಬೆಂಗಳೂರು, 26 ಜೂನ್ (ಹಿ.ಸ.) :
ಆ್ಯಂಕರ್ : ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ 162 ಶಿರಸ್ತೇದಾರ್/ಉಪ ತಹಶೀಲ್ದಾರ್ಗಳಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ತಹಶೀಲ್ದಾರ್ ಗ್ರೇಡ್–2 ಹುದ್ದೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕುರಿತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಮಾಹಿತಿ ನೀಡಿ, ಅಧಿಕಾರಿಗಳ ಸೇವಾ ಹಿರಿತನಕ್ಕೆ ತಕ್ಕ ಪ್ರತಿಫಲ ಕಲ್ಪಿಸುವ ಮೂಲಕ ಆಡಳಿತದ ವೇಗ ಹೆಚ್ಚಿಸುವುದು ಹಾಗೂ ಅವರ ಆತ್ಮವಿಶ್ವಾಸವನ್ನು ವೃದ್ಧಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಸೇವಾ ಹಿರಿತನವನ್ನು ಕಾಲಕಾಲಕ್ಕೆ ಪರಿಗಣಿಸಿ ಬಡ್ತಿಯೊಂದಿಗೆ ಹೆಚ್ಚಿನ ಜವಾಬ್ದಾರಿಗಳನ್ನು ನೀಡುವ ಮೂಲಕ ಅಧಿಕಾರಿಗಳ ಆಡಳಿತಾತ್ಮಕ ಅನುಭವವನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.