ಕೊಪ್ಪಳ ಬಳಿ ಅಪಘಾತ ; ಬೊಮ್ಮಾಯಿ ಸಂತಾಪ
ಹಾವೇರಿ, 27 ಜೂನ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ಭಾನಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯ ದರ್ಶನಕ್ಕೆ ತೆರಳುತ್ತಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಐವರು ದುರ್ಮರಣಕ್ಕೀಡಾಗಿ ಹಲವರು ಗಾಯಗೊಂಡಿರುವ ಸುದ್ದಿ ಅತ್ಯಂತ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್
ಕೊಪ್ಪಳ ಬಳಿ ಅಪಘಾತ ; ಬೊಮ್ಮಾಯಿ ಸಂತಾಪ


ಹಾವೇರಿ, 27 ಜೂನ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಭಾನಾಪುರ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂತ್ರಾಲಯ ದರ್ಶನಕ್ಕೆ ತೆರಳುತ್ತಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಐವರು ದುರ್ಮರಣಕ್ಕೀಡಾಗಿ ಹಲವರು ಗಾಯಗೊಂಡಿರುವ ಸುದ್ದಿ ಅತ್ಯಂತ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕ ಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಎಕ್ಸನಲ್ಲಿ ಸಂತಾಪ ಸೂಚಿಸಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ. ಗಾಯಗೊಂಡಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರವನ್ನು ತಕ್ಷಣವೇ ಘೋಷಿಸಬೇಕು. ಜೊತೆಗೆ ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ಹಾಗೂ ಅಗತ್ಯವಿರುವ ಎಲ್ಲಾ ನೆರವನ್ನು ನೀಡಬೇಕು ಎಂದು ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande