ಹಿರೇಪಡಸಲಗಿ ಗ್ರಾಮದಲ್ಲಿ ಮುಳುಗಡೆ ಪ್ರದೇಶದ ಕಟ್ಟಡಗಳ ಮೌಲ್ಯಮಾಪನ ಕಾರ್ಯಕ್ಕೆ ಚಾಲನೆ
ಬಾಗಲಕೋಟೆ, 27 ಜೂನ್ (ಹಿ.ಸ.) : ಆಂಕರ್ : ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ-3ರ ಅನುಷ್ಠಾನದ ಹಿನ್ನೆಲೆಯಲ್ಲಿ ಮುಳುಗಡೆ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳು ವೇಗ ಪಡೆದುಕೊಂಡಿವೆ. ಇದರ ಭಾಗವಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದ
Sabhe


ಬಾಗಲಕೋಟೆ, 27 ಜೂನ್ (ಹಿ.ಸ.) :

ಆಂಕರ್ : ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ-3ರ ಅನುಷ್ಠಾನದ ಹಿನ್ನೆಲೆಯಲ್ಲಿ ಮುಳುಗಡೆ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳು ವೇಗ ಪಡೆದುಕೊಂಡಿವೆ. ಇದರ ಭಾಗವಾಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಹಿರೇಪಡಸಲಗಿ ಗ್ರಾಮದಲ್ಲಿ ಭೂಸ್ವಾಧೀನಗೊಂಡ ಜಮೀನುಗಳಲ್ಲಿರುವ ಕಟ್ಟಡಗಳ ಮೌಲ್ಯಮಾಪನ ಕಾರ್ಯವನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

ದಿನಾಂಕ 27-06-2026 ರಂದು ಕೃಷ್ಣಾ ಮೇಲ್ದಂಡೆ ಯೋಜನೆ, ಪುನರ್ವಸತಿ ಉಪ ವಿಭಾಗ ನಂ.8, ಜಮಖಂಡಿ ಕಚೇರಿಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ನೇತೃತ್ವದ ತಂಡ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಮುಳುಗಡೆಯಾಗುವ ಪ್ರದೇಶದಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ಒಳಪಟ್ಟಿರುವ ಜಮೀನುಗಳಲ್ಲಿನ ಮನೆಗಳು ಹಾಗೂ ಇತರೆ ಕಟ್ಟಡಗಳ ಸ್ಥಿತಿಗತಿ, ವಿಸ್ತೀರ್ಣ ಮತ್ತು ನಿರ್ಮಾಣದ ಗುಣಮಟ್ಟವನ್ನು ಪರಿಶೀಲಿಸಿ ಮೌಲ್ಯಮಾಪನ ಮಾಡಲಾಯಿತು.

ಕಟ್ಟಡಗಳ ನಿಖರ ಮೌಲ್ಯಮಾಪನದ ಮೂಲಕ ಅರ್ಹ ಭೂ ಮಾಲೀಕರು ಹಾಗೂ ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ನಿಯಮಾನುಸಾರ ಪರಿಹಾರ ಒದಗಿಸುವ ಪ್ರಕ್ರಿಯೆಗೆ ಈ ಕಾರ್ಯ ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳ ಪರಿಶೀಲನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದು, ಮೌಲ್ಯಮಾಪನ ಕಾರ್ಯಕ್ಕೆ ಅಗತ್ಯ ಮಾಹಿತಿಯನ್ನು ಒದಗಿಸಿದರು.

ಯುಕೆಪಿ ಯೋಜನೆಯಿಂದ ಪ್ರಭಾವಿತವಾಗುವ ಕುಟುಂಬಗಳ ಪುನರ್ವಸತಿ ಹಾಗೂ ಪರಿಹಾರ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande