
ಬಾಗಲಕೋಟೆ, 27 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ತಾಲೂಕಿನ ಮಳಲಿ ಗ್ರಾಮದ ಸಮಗ್ರ ಅಭಿವೃದ್ಧಿ ಹಾಗೂ ಜನರ ಮೂಲಭೂತ ಸೌಲಭ್ಯಗಳ ವೃದ್ಧಿ ಉದ್ದೇಶದಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಆರ್ ಬಿ ತಿಮ್ಮಾಪುರ ನೆರವೇರಿಸಿದರು.
ಗ್ರಾಮದ ರಸ್ತೆ, ಮೂಲಸೌಕರ್ಯ ಸೇರಿದಂತೆ ಜನರಿಗೆ ಅಗತ್ಯವಾದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದ್ದು, ಕ್ಷೇತ್ರದ ಪ್ರತಿಯೊಂದು ಹಳ್ಳಿಯ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಈ ಸಂದರ್ಭದಲ್ಲಿ ತಿಳಿಸಲಾಯಿತು.
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯೇ ಸಮಗ್ರ ಪ್ರಗತಿಯ ಅಡಿಪಾಯವಾಗಿದ್ದು, ಜನರ ಬೇಡಿಕೆಗಳಿಗೆ ಸ್ಪಂದಿಸಿ ಅಗತ್ಯ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಪ್ರತಿ ಗ್ರಾಮಕ್ಕೂ ಉತ್ತಮ ರಸ್ತೆ, ಮೂಲಸೌಕರ್ಯ ಹಾಗೂ ಅಭಿವೃದ್ಧಿಯ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸದುಗೌಡ ಪಾಟೀಲ, ಲೋಕಾಪೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕಿವಡಿ (ವಕೀಲರು), ಕಾಂಗ್ರೆಸ್ ಮುಖಂಡರಾದ ಸುಧಾಕರ್ ಸಾರವಾಡ, ಕಲ್ಮೇಶ ಪಂಚಗಾಂವಿ, ನಾರಾಯಣ ಹವಾಲ್ದಾರ, ರಂಗಪ್ಪ ಮಲ್ಕನ್ನವರ, ಪಾಂಡುರಂಗ ಹೂವನ್ನವರ ಸೇರಿದಂತೆ ಹಲವು ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
ಗ್ರಾಮಸ್ಥರು ಅಭಿವೃದ್ಧಿ ಕಾಮಗಾರಿಗಳ ಆರಂಭಕ್ಕೆ ಸಂತಸ ವ್ಯಕ್ತಪಡಿಸಿ, ಗ್ರಾಮಕ್ಕೆ ಅಗತ್ಯವಿರುವ ಇನ್ನಷ್ಟು ಮೂಲಸೌಕರ್ಯ ಕಾಮಗಾರಿಗಳಿಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande