ಕೊಪ್ಪಳ ಬಳಿ ಭೀಕರ ರಸ್ತೆ ಅಪಘಾತ ; ಐವರ ದುರ್ಮರಣ
ಕೊಪ್ಪಳ, 27 ಜೂನ್ (ಹಿ.ಸ.) : ಆ್ಯಂಕರ್ : ಮಂತ್ರಾಲಯಕ್ಕೆ ದರ್ಶನಕ್ಕೆ ತೆರಳುತ್ತಿದ್ದ ಕುಟುಂಬದವರಿದ್ದ ಓಮ್ನಿ ವಾಹನಕ್ಕೆ ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕ
Accident


ಕೊಪ್ಪಳ, 27 ಜೂನ್ (ಹಿ.ಸ.) :

ಆ್ಯಂಕರ್ : ಮಂತ್ರಾಲಯಕ್ಕೆ ದರ್ಶನಕ್ಕೆ ತೆರಳುತ್ತಿದ್ದ ಕುಟುಂಬದವರಿದ್ದ ಓಮ್ನಿ ವಾಹನಕ್ಕೆ ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45), ಪ್ರವೀಣ್ ಬಾಳೆಕಾಯಿ (40) ಹಾಗೂ ಚಿನ್ಮಯ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳಾಗಿದ್ದಾರೆ.

ಮಾಹಿತಿಯ ಪ್ರಕಾರ, ಕುಟುಂಬದವರು ಓಮ್ನಿ ವಾಹನದಲ್ಲಿ ಮಂತ್ರಾಲಯಕ್ಕೆ ತೆರಳುತ್ತಿದ್ದ ವೇಳೆ, ಪಕ್ಕದ ರಸ್ತೆಯಲ್ಲಿ ಸಾಗುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಓಮ್ನಿಗೆ ಎದುರಿನಿಂದಲೇ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಓಮ್ನಿ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರು ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ನಾಲ್ವರನ್ನು ತಕ್ಷಣವೇ ರಕ್ಷಿಸಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ಮುಂದುವರಿದಿದೆ. ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಕುಕನೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande