ನಾಡಪ್ರಭು ಕೆಂಪೇಗೌಡ ಜಯಂತಿ ; ಆರ್. ಅಶೋಕ್ ಶುಭಾಶಯ
ಬೆಂಗಳೂರು, 27 ಜೂನ್ (ಹಿ.ಸ.) : ಆ್ಯಂಕರ್ : ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ ಜಯಂತ
ಅಶೋಕ ಪೋಸ್ಟ್


ಬೆಂಗಳೂರು, 27 ಜೂನ್ (ಹಿ.ಸ.) :

ಆ್ಯಂಕರ್ : ನಾಡಪ್ರಭು ಕೆಂಪೇಗೌಡ ಜಯಂತಿಯ ಅಂಗವಾಗಿ ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ರಾಜ್ಯದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಎಲ್ಲರಿಗೂ ನಾಡಪ್ರಭು ಕೆಂಪೇಗೌಡರ ಜಯಂತಿಯ ಹಾರ್ದಿಕ ಶುಭಾಶಯಗಳು ಎಂದು ತಿಳಿಸಿದ್ದಾರೆ.

ನೂರಾರು ಕೆರೆಗಳನ್ನು ನಿರ್ಮಾಣ ಮಾಡಿ, ವ್ಯಾಪಾರ ವಹಿವಾಟಿಗೆ ಅನೇಕ ಪೇಟೆಗಳನ್ನು ಕಟ್ಟಿ, ಅತ್ಯಂತ ಯೋಜನಾಬದ್ಧವಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೇಗೌಡರ ಸಂಸ್ಮರಣೆಗಳ ಜೊತೆಗೆ, ಆ ಧೀಮಂತ ಆಡಳಿತಗಾರನಿಗೆ ಶ್ರದ್ಧಾಪೂರ್ವಕ ಪ್ರಣಾಮಗಳನ್ನು ಸಲ್ಲಿಸೋಣ ಎಂದು ಅವರು ಹೇಳಿದ್ದಾರೆ.

ಬೆಂಗಳೂರು ನಗರ ನಿರ್ಮಾಣಕ್ಕೆ ನಾಡಪ್ರಭು ಕೆಂಪೇಗೌಡರ ಕೊಡುಗೆ ಮತ್ತು ದೂರದೃಷ್ಟಿಯ ಆಡಳಿತವನ್ನು ಸ್ಮರಿಸಿದ ಅಶೋಕ್, ಅವರ ಆದರ್ಶಗಳು ಮುಂದಿನ ಪೀಳಿಗೆಗೂ ಪ್ರೇರಣೆಯಾಗಲಿ ಎಂದು ಆಶಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande