
ಕುಕನೂರು, 27 ಜೂನ್ (ಹಿ.ಸ.) :
ಆ್ಯಂಕರ್ : ಕುಕನೂರು ತಾಲೂಕಿನ ಭಾನಾಪುರ ಸಮೀಪದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ಲಾರಿಯು ಡಿವೈಡರ್ ದಾಟಿ ಎದುರಲ್ಲಿದ್ದ ಒಮಿನಿಗೆ ಡಿಕ್ಕಿ ಹೊಡೆದ ಕಾರಣ ಮಂತ್ರಾಲಯಕ್ಕೆ ಹೊರಟಿದ್ದ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯ ಕಬ್ಬಾರ್ ಗ್ರಾಮದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ನಡೆದಿದೆ.
ಮೃತರನ್ನು ಕೆಂಚಮ್ಮ ಬಾಳೆಕಾಯಿ (35), ಅಮೃತಾ ಕೋಟ್ಯಾಳ್ (25), ರಮೇಶ್ ಬಳ್ಳಾರಿ (45) ಹಾಗೂ ಪ್ರವೀಣ್ (23) ಎಂದು ಗುರುತಿಸಲಾಗಿದೆ. ಗ್ರಾಮಸ್ಥರ ತಂಡವು ಓಮಿನಿಯಲ್ಲಿ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ತೆರಳುತ್ತಿದ್ದರು.
ಭಾನಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಪಕ್ಕದ ರಸ್ತೆಯಿಂದ ವೇಗವಾಗಿ ಬರುತ್ತಿದ್ದ ಅಶೋಕ ಲೇಲ್ಯಾಂಡ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ದಾಟಿ ಎದುರು ದಿಕ್ಕಿನಿಂದ ಬರುತ್ತಿದ್ದ ಓಮಿನಿ ವಾಹನಕ್ಕೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಓಮಿನಿ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುಕನೂರು ಪೆÇಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಗಾಯಗೊಂಡವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಈ ದುರ್ಘಟನೆಗೆ ಸಂಬಂಧಿಸಿದಂತೆ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೆÇಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಸಂತಾಪ : ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಘಟನೆಯ ಕುರಿತು ಸಂತಾಪ ಸೂಚಿಸಿ,
ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಘೋಷಿಸಬೇಕು.
ಗಾಯಾಳುಗಳಿಗೆ ಅತ್ಯುತ್ತಮ ಚಿಕಿತ್ಸೆಗೆ ನೆರವು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್