
ಕೊಪ್ಪಳ, 27 ಜೂನ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ಭರತಕುಮಾರ, ಎಂ.ಪಾಂಡುರಂಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮುತ್ತಣ್ಣ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ವಾರ್ತಾ ಇಲಾಖೆಯಲ್ಲಿ ಕೆಂಪೇಗೌಡ ಜಯಂತಿ : ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೊಪ್ಪಳ ಕಚೇರಿಯಲ್ಲಿಯೂ ಆಚರಿಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್