
ವಿಜಯಪುರ, 27 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಅಗರಖೇಡ ಮುಖ್ಯ ಬಿಸಿಎಮ್ ಹಾಸ್ಟೇಲ್ ರಸ್ತೆ ಮಳೆಯಿಂದಾಗಿ ಸಂಪೂರ್ಣ ಹದಗೆಟ್ಟು, ರಸ್ತೆ ಮಧ್ಯೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು.
ರಸ್ತೆಯ ದುಸ್ಥಿತಿ ಕುರಿತು ಗಮನ ಹರಿಸಿದ ಇಂಡಿ ನಗರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಸಭೆ ಅಧಿಕಾರಿ ಶ್ರೀಮತಿ ಕೋಳಿ ಅವರು ಸ್ಥಳ ಪರಿಶೀಲನೆ ನಡೆಸಿ, ರಸ್ತೆ ಪರಿಸ್ಥಿತಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು.
ನಂತರ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ರಸ್ತೆ ದುರಸ್ತಿ ಕಾಮಗಾರಿಗೆ ಚಾಲನೆ ನೀಡಲಾಯಿತು. ಸ್ಥಳದಲ್ಲಿಯೇ ಅಗತ್ಯ ಕ್ರಮಗಳನ್ನು ಕೈಗೊಂಡು ಗುಂಡಿಗಳನ್ನು ಮುಚ್ಚುವ ಹಾಗೂ ರಸ್ತೆ ಸುಧಾರಣಾ ಕಾರ್ಯಗಳನ್ನು ಆರಂಭಿಸಲಾಯಿತು.
ಮಳೆಗಾಲದಲ್ಲಿ ರಸ್ತೆ ಹಾಳಾಗಿ ಸಂಚಾರಕ್ಕೆ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ತುರ್ತು ಕ್ರಮ ಕೈಗೊಂಡ ಇಂಡಿ ನಗರಸಭೆ ಆಯುಕ್ತರಾದ ಶಿವಾನಂದ ಪೂಜಾರಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಸ್ತೆ ದುರಸ್ತಿ ಕಾಮಗಾರಿ ಪೂರ್ಣಗೊಂಡ ಬಳಿಕ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande