ತಿಮ್ಮಾಪುರದಲ್ಲಿ ಎಸ್ಐಆರ್ ಕಾರ್ಯಕ್ರಮಕ್ಕೆ ಚಾಲನೆ : ಶಾಸಕ ಉಮೇಶ್ ಮೇಟಿ ಅವರಿಂದ ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ
ಬಾಗಲಕೋಟೆ, 27 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ರಮಕ್ಕೆ ಶಾಸಕ ಉಮೇಶ್ ಮೇಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪ
S I r


ಬಾಗಲಕೋಟೆ, 27 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯಕ್ರಮಕ್ಕೆ ಶಾಸಕ ಉಮೇಶ್ ಮೇಟಿ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಉಮೇಶ್ ಮೇಟಿ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಪಟ್ಟಿ ಅತ್ಯಂತ ಮಹತ್ವದ ದಾಖಲೆ ಆಗಿದ್ದು, ಅರ್ಹ ಪ್ರತಿಯೊಬ್ಬ ನಾಗರಿಕರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಹಾಗೂ ಯಾವುದೇ ಅರ್ಹ ಮತದಾರರ ಹೆಸರು ಕೈಬಿಡದಂತೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಹೇಳಿದರು.

ಎಸ್ಐಆರ್ ಕಾರ್ಯಕ್ರಮದ ಉದ್ದೇಶ ಮತದಾರರ ಪಟ್ಟಿಯನ್ನು ಮತ್ತಷ್ಟು ನಿಖರ, ಪಾರದರ್ಶಕ ಮತ್ತು ದೋಷರಹಿತಗೊಳಿಸುವುದಾಗಿದೆ. ಸಾರ್ವಜನಿಕರು ತಮ್ಮ ಹೆಸರು, ವಿಳಾಸ ಹಾಗೂ ಇತರ ವಿವರಗಳನ್ನು ಪರಿಶೀಲಿಸಿಕೊಂಡು ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಗ್ರಾಮದ ಪ್ರತಿಯೊಬ್ಬ ಅರ್ಹ ಯುವ ಮತದಾರರು ನೋಂದಣಿ ಮಾಡಿಸಿಕೊಳ್ಳಬೇಕು. ಪ್ರಜಾಪ್ರಭುತ್ವದ ಬಲವರ್ಧನೆಗೆ ಪ್ರತಿಯೊಬ್ಬರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂದು ಶಾಸಕ ಉಮೇಶ್ ಮೇಟಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಎಸ್ಐಆರ್ ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ, ಅಗತ್ಯ ದಾಖಲೆಗಳೊಂದಿಗೆ ನೋಂದಣಿ ಮತ್ತು ತಿದ್ದುಪಡಿ ಕಾರ್ಯವನ್ನು ಪೂರ್ಣಗೊಳಿಸುವಂತೆ ಮನವಿ ಮಾಡಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande