ನಾಡಪ್ರಭು ಕೆಂಪೇಗೌಡ ಪ್ರತಿಮೆಗೆ ವಿಜಯೇಂದ್ರ ಮಾಲಾರ್ಪಣೆ
ಬೆಂಗಳೂರು, 27 ಜೂನ್ (ಹಿ.ಸ.) : ಆ್ಯಂಕರ್ : ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವದ ಅಂಗವಾಗಿ ಬೆಂಗಳೂರಿನ ಸದಾಶಿವನಗರದ ಕೆಂಪೇಗೌಡ ಗಡಿಗೋಪುರ ಉದ್ಯಾನವನದಲ್ಲಿ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಿ, ನಾಡಪ್ರಭು ಕೆಂಪೇಗೌಡರ ಪ್
ವಿಜಯೇಂದ್ರ


ಬೆಂಗಳೂರು, 27 ಜೂನ್ (ಹಿ.ಸ.) :

ಆ್ಯಂಕರ್ : ನಾಡಪ್ರಭು ಕೆಂಪೇಗೌಡರ 517ನೇ ಜನ್ಮದಿನೋತ್ಸವದ ಅಂಗವಾಗಿ ಬೆಂಗಳೂರಿನ ಸದಾಶಿವನಗರದ ಕೆಂಪೇಗೌಡ ಗಡಿಗೋಪುರ ಉದ್ಯಾನವನದಲ್ಲಿ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭಾಗವಹಿಸಿ, ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಾಗತಿಕ ಭೂಪಟದಲ್ಲಿ ಬೆಂಗಳೂರು ಅಪ್ರತಿಮ ಆಧುನಿಕ ನಗರವಾಗಿ ಬೆಳೆಯಲು ನಾಡಪ್ರಭು ಕೆಂಪೇಗೌಡರು ಹಾಕಿದ ಅಡಿಪಾಯವೇ ಪ್ರಮುಖ ಕಾರಣವಾಗಿದೆ ಎಂದು ಸ್ಮರಿಸಿದರು.

ಕೆಂಪೇಗೌಡರ ದೂರದರ್ಶಿತ್ವದ ಆಡಳಿತ, ಪರಿಸರದ ಬಗ್ಗೆ ಅವರ ಕಾಳಜಿ ಹಾಗೂ ಸುಸ್ಥಿರ ನಗರಾಭಿವೃದ್ಧಿಯ ಚಿಂತನೆಗಳು ಇಂದಿಗೂ ನಗರ ನಿರ್ಮಾಣಕ್ಕೆ ಮಾರ್ಗದರ್ಶಿಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಕೆಂಪೇಗೌಡರ ಸಂಸ್ಮರಣಾರ್ಥ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಸೇರಿದಂತೆ ಬಿಜೆಪಿ ಮುಖಂಡರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ನಾಡಪ್ರಭುಗಳಿಗೆ ಗೌರವ ನಮನ ಸಲ್ಲಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande