ಭವ್ಯ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡ : ಮುಖ್ಯಮಂತ್ರಿ
ಬೆಂಗಳೂರು, 27 ಜೂನ್ (ಹಿ.ಸ.) : ಆ್ಯಂಕರ್ : ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಪ್ರಯುಕ್ತ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆಗೆ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶ್ರ
ಪುಷ್ಪ ನಮನ


ಬೆಂಗಳೂರು, 27 ಜೂನ್ (ಹಿ.ಸ.) :

ಆ್ಯಂಕರ್ : ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಪ್ರಯುಕ್ತ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆಗೆ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಶಿರಾ ಸ್ಫಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ, ಸಚಿವರಾದ ಕೆ. ಹೆಚ್. ಮುನಿಯಪ್ಪ, ಕೃಷ್ಣ ಬೈರೇಗೌಡ, ಶಾಸಕ ಪ್ರದೀಪ್ ಈಶ್ವರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande