ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಮತ್ತೊಂದು ಹೆಜ್ಜೆ
ಬೆಂಗಳೂರು, 28 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡಿದೆ. ಮೆಖ್ರಿ ವೃತ್ತದಿಂದ ಹೆಬ್ಬಾಳ ಜಂಕ್ಷನ್ವರೆಗೆ ನಿರ್ಮಾಣವಾಗಲಿರುವ ಮೂರು ಪಥಗಳ ಜೋಡಿ ಸುರಂಗ ಮಾರ್ಗಕ್ಕೆ ಮುಖ್ಯಮ
Cm


ಬೆಂಗಳೂರು, 28 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ಯೋಜನೆಗೆ ಚಾಲನೆ ನೀಡಿದೆ. ಮೆಖ್ರಿ ವೃತ್ತದಿಂದ ಹೆಬ್ಬಾಳ ಜಂಕ್ಷನ್ವರೆಗೆ ನಿರ್ಮಾಣವಾಗಲಿರುವ ಮೂರು ಪಥಗಳ ಜೋಡಿ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೆಬ್ಬಾಳವು ಬೆಂಗಳೂರಿನ ಹೆಬ್ಬಾಗಿಲಾಗಿದ್ದು, ಈ ಯೋಜನೆಯಿಂದ ಈ ಭಾಗದ ಸಂಚಾರ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

2.5 ಕಿಲೋಮೀಟರ್ ಉದ್ದದ 'ಕಟ್ ಅಂಡ್ ಕವರ್' ಮಾದರಿಯ ಸುರಂಗ ಮಾರ್ಗ ಇದಾಗಿದ್ದು, ಸಾರ್ವಜನಿಕರಿಗೆ ಯಾವುದೇ ಟೋಲ್ ಶುಲ್ಕವಿಲ್ಲದೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು. ಯೋಜನೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ತನ್ನ ಸ್ವಂತ ಸಂಪನ್ಮೂಲಗಳಿಂದ ಜಾರಿಗೊಳಿಸುತ್ತಿದೆ ಎಂದು ತಿಳಿಸಿದರು.

ಮುಂದಿನ 50 ವರ್ಷಗಳ ಅಭಿವೃದ್ಧಿಗೆ ಯೋಜನೆ

ರಾಜ್ಯ ಸರ್ಕಾರ ಮುಂದಿನ ಐವತ್ತು ವರ್ಷಗಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಯೋಜನೆಗಳನ್ನು ರೂಪಿಸುತ್ತಿದೆ ಎಂದು ತಿಳಿಸಿದ ಶಿವಕುಮಾರ್, ಜನರ ಬದುಕಿನಲ್ಲಿ ಬದಲಾವಣೆ ತರಲು ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಮೇಕೆದಾಟು ಯೋಜನೆ ಕುರಿತು ಮಾತನಾಡಿದ ಅವರು, ಈ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕರ್ನಾಟಕದ ಪರವಾಗಿ ತೀರ್ಪು ನೀಡಿರುವುದು ರಾಜ್ಯದ ನೀರಿನ ಹಕ್ಕು ರಕ್ಷಣೆಗೆ ಮಹತ್ವದ ಬೆಳವಣಿಗೆಯಾಗಿದೆ ಎಂದು ಹೇಳಿದರು.

17 ಕಿಮೀ ಸುರಂಗ ರಸ್ತೆ ಯೋಜನೆ ಪ್ರಸ್ತಾವನೆ

ಹೆಬ್ಬಾಳದಿಂದ ರೇಷ್ಮೆ ಸಂಸ್ಥೆವರೆಗೆ ಸುಮಾರು 17 ಕಿಲೋಮೀಟರ್ ಉದ್ದದ ಸುರಂಗ ರಸ್ತೆ ನಿರ್ಮಾಣದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಮೂರು-ನಾಲ್ಕು ವರ್ಷಗಳಲ್ಲಿ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಸುರಂಗ ರಸ್ತೆಯಲ್ಲಿ ಶುಲ್ಕ ಪಾವತಿಸಿ ಸಂಚರಿಸಲು ಬಯಸುವವರು ಆ ಸೌಲಭ್ಯ ಬಳಸಬಹುದು. ಇದರಿಂದ ಸಾವಿರಾರು ವಾಹನ ಸವಾರರ ಸಮಯ ಉಳಿತಾಯವಾಗಲಿದ್ದು, ನಗರದ ಸಂಚಾರ ವ್ಯವಸ್ಥೆ ಸುಧಾರಿಸಲಿದೆ ಎಂದು ಹೇಳಿದರು.

ಬೆಂಗಳೂರು ಅಭಿವೃದ್ಧಿಗೆ ₹1.50 ಲಕ್ಷ ಕೋಟಿ ಯೋಜನೆ

ಬೆಂಗಳೂರು ಅಭಿವೃದ್ಧಿಗೆ ಸುಮಾರು ₹1.50 ಲಕ್ಷ ಕೋಟಿ ಮೌಲ್ಯದ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದ ಅವರು, ಬೆಂಗಳೂರು ಬಿಸಿನೆಸ್ ಕಾರಿಡಾರ್ ಸೇರಿದಂತೆ ಹಲವು ಪ್ರಮುಖ ಮೂಲಸೌಕರ್ಯ ಯೋಜನೆಗಳು ನಗರಕ್ಕೆ ಹೊಸ ರೂಪ ನೀಡಲಿವೆ ಎಂದರು.

ಈ ಯೋಜನೆಗಳನ್ನು ಎರಡು ದಶಕಗಳ ಹಿಂದೆ ಜಾರಿಗೊಳಿಸಿದ್ದರೆ ವೆಚ್ಚ ಕಡಿಮೆಯಾಗುತ್ತಿತ್ತು. ಆದರೆ ಈಗ ಭೂಸ್ವಾಧೀನ ಸೇರಿದಂತೆ ವಿವಿಧ ಕಾರಣಗಳಿಂದ ಯೋಜನಾ ವೆಚ್ಚ ಹೆಚ್ಚಾಗಿದೆ ಎಂದು ಹೇಳಿದರು.

ವಿಪಕ್ಷಗಳ ಟೀಕೆಗೆ ತಿರುಗೇಟು

ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳನ್ನು ತಳ್ಳಿಹಾಕಿದ ಶಿವಕುಮಾರ್, ಯಾವುದೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದರು.

ವಿಪಕ್ಷಗಳ ಟೀಕೆಗಳನ್ನು ಸರ್ಕಾರ ಸ್ವಾಗತಿಸುತ್ತದೆಯಾದರೂ, ಅಭಿವೃದ್ಧಿ ಕಾರ್ಯಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಐದು ಪಾಲಿಕೆಗಳ ನಿರ್ಧಾರ ಸಮೂಹ ಚಿಂತನೆಯ ಫಲ

ಬೆಂಗಳೂರು ಆಡಳಿತದ ಮೇಲಿನ ಒತ್ತಡ ಕಡಿಮೆ ಮಾಡಲು ನಗರವನ್ನು ಐದು ಪಾಲಿಕೆಗಳಾಗಿ ವಿಭಜಿಸುವ ನಿರ್ಧಾರ ಕೇವಲ ತಮ್ಮ ವೈಯಕ್ತಿಕ ತೀರ್ಮಾನವಲ್ಲ. ವಿರೋಧ ಪಕ್ಷಗಳ ಸಲಹೆಗಳನ್ನೂ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

'ಅಂಗೈ ಉಜ್ಜಿಕೊಳ್ಳುವವರ' ಬಗ್ಗೆ ವ್ಯಂಗ್ಯ

ವಿಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಅಕ್ಬರ್–ಬೀರ್ಬಲ್ ಕಥೆಯನ್ನು ಉಲ್ಲೇಖಿಸಿ, ಅಧಿಕಾರ ಸಿಗದ ಬೇಸರದಿಂದ ಕೆಲವರು ಅಂಗೈ ಉಜ್ಜಿಕೊಳ್ಳುತ್ತಾ ಡಾಕ್ಟರ್ಗಳನ್ನು ಹುಡುಕಿಕೊಂಡು ಹೋಗುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಹಸಿರು ಬೆಂಗಳೂರು ಅಭಿಯಾನಕ್ಕೆ ಮೆಚ್ಚುಗೆ

ಇತ್ತೀಚೆಗೆ ನಡೆದ ಕೆಂಪೇಗೌಡ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಹಸಿರು ಬೆಂಗಳೂರು ಅಭಿಯಾನದಲ್ಲಿ 15 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಗಿನ್ನೆಸ್ ದಾಖಲೆ ನಿರ್ಮಾಣವಾಗಿರುವುದು ಸರ್ಕಾರ, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಒಗ್ಗಟ್ಟಿನ ಸಾಧನೆ ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande