ಜು.4 ರಂದು ಹು-ಧಾ ಮಹಾಪೌರ ಹಾಗೂ ಉಪ ಮಹಾಪೌರರ ಚುನಾವಣೆ
ಹುಬ್ಬಳ್ಳಿ, 28 ಜೂನ್ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 25 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆಯು ಜುಲೈ 4 ರಂದು ಬೆಳಿಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಹಾಪೌರ ಹಾಗೂ ಉಪಮಹಾಪ
ಜು.4 ರಂದು ಹು-ಧಾ ಮಹಾಪೌರ ಹಾಗೂ ಉಪ ಮಹಾಪೌರರ ಚುನಾವಣೆ


ಹುಬ್ಬಳ್ಳಿ, 28 ಜೂನ್ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 25 ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಚುನಾವಣೆಯು ಜುಲೈ 4 ರಂದು ಬೆಳಿಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ನಾಮಪತ್ರಗಳ ಸಲ್ಲಿಸುವುದು. ನಂತರ ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಅಭ್ಯರ್ಥಿಯು ಒಬ್ಬರಕ್ಕಿಂತ ಹೆಚ್ಚಿಗೆ ಇದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ಮತಗಳ ಎಣಿಕೆ ಹಾಗೂ ಫಲಿತಾಂಶ ಘೋಷಣೆ ಪ್ರಕ್ರಿಯೆಗಳು ಜರುಗಲಿವೆ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande