ಶಿಕ್ಷಣದೊಂದಿಗೆ ಉನ್ನತ ಪ್ರತಿಭೆ ಮೈಗೂಡಿಸಿಕೊಳ್ಳಿ : ಶಂಕರ ಪಾಟೀಲ ಮುನೇನಕೊಪ್ಪ
ಹುಬ್ಬಳ್ಳಿ, 28 ಜೂನ್ (ಹಿ.ಸ.) : ಆ್ಯಂಕರ್ : ಇಂದಿನ ತೀವ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶಿಕ್ಷಣ ಪಡೆದರೆ ಸಾಕಾಗುವುದಿಲ್ಲ. ಶಿಕ್ಷಣದ ಜೊತೆಗೆ ಉನ್ನತ ಪ್ರತಿಭೆ, ಕೌಶಲ್ಯ ಮತ್ತು ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರಮುಖ ಕರ್ತವ್ಯವಾಗಿದೆ ಎಂದು ಮಾಜಿ ಸಚಿವ ಶಂಕರ
ಪ್ರತಿಭಾ ಪುರಸ್ಕಾರ


ಹುಬ್ಬಳ್ಳಿ, 28 ಜೂನ್ (ಹಿ.ಸ.) :

ಆ್ಯಂಕರ್ : ಇಂದಿನ ತೀವ್ರ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಶಿಕ್ಷಣ ಪಡೆದರೆ ಸಾಕಾಗುವುದಿಲ್ಲ. ಶಿಕ್ಷಣದ ಜೊತೆಗೆ ಉನ್ನತ ಪ್ರತಿಭೆ, ಕೌಶಲ್ಯ ಮತ್ತು ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಪ್ರಮುಖ ಕರ್ತವ್ಯವಾಗಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ಅವರು ನವಲಗುಂದದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ನವಲಗುಂದ-ಅಣ್ಣಿಗೇರಿ ತಾಲ್ಲೂಕು ಘಟಕದ ವತಿಯಿಂದ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ 2025–26ನೇ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಮಹಾಸಭೆಯ ಉದ್ದೇಶ ಮತ್ತು ಸಮಾಜಮುಖಿ ಚಿಂತನೆಗಳನ್ನು ಅರ್ಥಮಾಡಿಕೊಂಡು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸೇವಾ ಮನೋಭಾವ ಬೆಳೆಸಿಕೊಂಡರೆ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮಕ್ಕೆ ಶಿರಕೋಳದ ಶ್ರೀ ಗುರುಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ನವಲಗುಂದ ಪಂಚಗ್ರಹ ಹಿರೇಮಠದ ಶ್ರೀ ಇಮ್ಮಡಿ ಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಅಣ್ಣಿಗೇರಿ ದಾಸೋಹಮಠದ ಡಾ. ಶಿವಕುಮಾರ ಮಹಾಸ್ವಾಮಿಗಳು, ಸೀತಾಗಿರಿಯ ಡಾ. ಎ.ಸಿ. ವಾಲಿ ಗುರೂಜಿ ಹಾಗೂ ಶಲವಡಿ ವಿರಕ್ತಮಠದ ಗುರುಶಾಂತೇಶ್ವರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರ ಮಾರ್ಗದರ್ಶನದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಶಿವಶಂಕರ ಕಲ್ಲೂರ ವಹಿಸಿದ್ದರು.

ಜಿಲ್ಲಾಧ್ಯಕ್ಷ ಪ್ರದೀಪಗೌಡ ಪಾಟೀಲ, ಲಿಂಗರಾಜ ದೇಸಾಯಿ, ಮೋಹನ ಲಿಂಬಿಕಾಯಿ, ವಿಜಯ ಕುಲಕರ್ಣಿ, ಬಾಪುಗೌಡ ಪಾಟೀಲ, ಎ.ಬಿ. ಹಿರೇಮಠ, ಬಿ.ಬಿ. ಗಂಗಾಧರಮಠ ಸೇರಿದಂತೆ ಸಮಾಜದ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande