
ಬಾಗಲಕೋಟೆ, 28 ಜೂನ್ (ಹಿ.ಸ.) :
ಆಂಕರ್ : ಬಾಗಲಕೋಟೆ ನಗರದ ನವನಗರ ಯುನಿಟ್–2ರ ಸೆಕ್ಟರ್ ನಂ.88ರಲ್ಲಿ ನೂತನವಾಗಿ ನಿರ್ಮಿಸಲಾದ ಉದ್ಯಾನವನ್ನು ಶಾಸಕ ಉಮೇಶ ಮೇಟಿ ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ಅವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ನಗರ ಪ್ರದೇಶಗಳಲ್ಲಿ ಉದ್ಯಾನಗಳ ನಿರ್ಮಾಣವು ಜನರ ಆರೋಗ್ಯ, ಮನೋವಿಕಾಸ ಹಾಗೂ ಪರಿಸರ ಸಂರಕ್ಷಣೆಗೆ ಸಹಕಾರಿಯಾಗುತ್ತದೆ. ನವನಗರದ ನಿವಾಸಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ಉದ್ದೇಶದಿಂದ ಉದ್ಯಾನವನ್ನು ಅಭಿವೃದ್ಧಿಪಡಿಸಲಾಗಿದ್ದು, ಮಕ್ಕಳು, ವೃದ್ಧರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಉದ್ಯಾನದಲ್ಲಿ ಹಸಿರು ಪ್ರದೇಶ, ವಾಯುವಿಹಾರಕ್ಕೆ ಅನುಕೂಲ, ಕುಳಿತುಕೊಳ್ಳುವ ವ್ಯವಸ್ಥೆ ಸೇರಿದಂತೆ ಸಾರ್ವಜನಿಕರ ಅಗತ್ಯಕ್ಕೆ ತಕ್ಕಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಗರಾಭಿವೃದ್ಧಿಯ ಜೊತೆಗೆ ಜನರ ಜೀವನಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಟಿಡಿಎ ಅಧಿಕಾರಿಗಳು, ಸ್ಥಳೀಯ ಮುಖಂಡರು, ನಿವಾಸಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. ನೂತನ ಉದ್ಯಾನ ಸಾರ್ವಜನಿಕರ ಬಳಕೆಗೆ ಲಭ್ಯವಾಗಿರುವುದರಿಂದ ನವನಗರದ ನಿವಾಸಿಗಳಲ್ಲಿ ಸಂತಸ ವ್ಯಕ್ತವಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande