
ಬೆಂಗಳೂರು, 29 ಜೂನ್ (ಹಿ.ಸ.) :
ಆ್ಯಂಕರ್ : ಕಾದ ಬೇಸಿಗೆಯ ಬಿಸಿಲನ್ನು ಆರಿಸಿ, ತಂಪಾದ ಮುಂಗಾರಿನ ಸಡಗರವನ್ನು ಹೊತ್ತು ತರುವ ರೈತಾಪಿ ವರ್ಗದ ಮೊದಲ ಹಬ್ಬ ಕಾರ ಹುಣ್ಣಿಮೆ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ನಮ್ಮ ದೇಶದ ಬೆನ್ನೆಲುಬಾದ ಅನ್ನದಾತನಿಗೆ ಹೆಗಲಿಗೆ ಹೆಗಲು ಕೊಟ್ಟು ದುಡಿಯುವ ಎತ್ತುಗಳನ್ನು ಸಿಂಗರಿಸಿ, ಪೂಜಿಸಿ, ಭೂಮಿ ತಾಯಿಗೆ ಕೃತಜ್ಞತೆ ಸಲ್ಲಿಸುವ ಗ್ರಾಮೀಣ ಸೊಗಡಿನ ಪುಣ್ಯ ದಿನವಿದು. ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದು, ಹೊಲಗದ್ದೆಗಳೆಲ್ಲ ಹಸಿರಿನಿಂದ ಕಂಗೊಳಿಸಲಿ, ರೈತರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.