ಜೈವಿಕ ಗೊಬ್ಬರ ಬಳಕೆಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಕರೆ
ಜೈವಿಕ ಗೊಬ್ಬರ ಬಳಕೆಗೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಕರೆ
ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ವಿಪತ್ತು ನಿರ್ವಹಣೆಯ ಬಗ್ಗೆ ಸಭೆ ನಡೆಸಿದರು.


ಕೋಲಾರ, ಜೂನ್ ೨೯ (ಹಿ.ಸ) :

ಆ್ಯಂಕರ್ : ಕೃಷಿಯಲ್ಲಿ ರಸಗೊಬ್ಬರಗಳ ಅತಿಯಾದ ಬಳಕೆ ಮಣ್ಣಿನ ಫಲವತ್ತತೆ ಮತ್ತು ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಆದ್ದರಿಂದ ರೈತರು ರಾಸಾಯನಿಕ ರಸಗೊಬ್ಬರದ ಮೇಲಿನ ಅವಲಂಬನೆಯನ್ನು ತಕ್ಷಣದಿಂದಲೇ ಕಡಿಮೆ ಮಾಡಿ, ಜೈವಿಕ ಗೊಬ್ಬರಗಳ ಬಳಕೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತ ಭವನದಲ್ಲಿ ನಡೆದ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ನೀರಿನ ಲಭ್ಯತೆ, ಅಂತರ್ಜಲ ಮಟ್ಟ ಮತ್ತು ಮುಂಬರುವ ದಿನಗಳ ನೀರಿನ ಬೇಡಿಕೆಯನ್ನು ಪರಿಗಣಿಸಿ ರೂಪಿಸಲಾದ ಕ್ರಿಯಾ ಯೋಜನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಿದರು. ೨೦೨೫ರ ಜನವರಿಯಿಂದ ನವೆಂಬರ್ವರೆಗೆ ಜಿಲ್ಲೆಯಲ್ಲಿ ೭೩೫.೧ ಮಿ.ಮೀ. ವಾಡಿಕೆ ಮಳೆಯಾಗಬೇಕಾಗಿದ್ದು, ೯೨೭.೦ ಮಿ.ಮೀ. ನಷ್ಟು ಹೆಚ್ಚುವರಿ ಮಳೆಯಾಗಿದೆ (ಶೇ.೨೬ರಷ್ಟು ಹೆಚ್ಚಳ). ಪ್ರಸ್ತುತ ೨೦೨೬ರ ಜೂನ್ ತಿಂಗಳಲ್ಲಿ ವಾಡಿಕೆಗಿಂತ ಶೇ. ೩ರಷ್ಟು ಹೆಚ್ಚು ಮಳೆ ದಾಖಲಾಗಿದೆ.

ಮುಂಬರುವ ದಿನಗಳಲ್ಲಿ ನೀರಿನ ಕೊರತೆ ಉಂಟಾಗಬಹುದಾದ ೧೩೦ ಗ್ರಾಮೀಣ ಗ್ರಾಮಗಳು ಮತ್ತು ೪೯ ನಗರ ವಾರ್ಡ್ಗಳನ್ನು ಗುರುತಿಸಲಾಗಿದ್ದು, ಇವುಗಳಿಗಾಗಿ `ಮೈಕ್ರೋ ಲೆವೆಲ್' ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿಕೊಳ್ಳಬೇಕು. ಅಗತ್ಯವಿದ್ದಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಆಧಾರದಲ್ಲಿ ಪಡೆಯಲು ಮತ್ತು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಲು ಸೂಚಿಸಿದರು.

ಜಿಲ್ಲೆಯಲ್ಲಿ ಸುಮಾರು ೨೯ ವಾರಗಳಿಗೆ ಸಾಕಾಗುವಷ್ಟು ೩,೦೯,೧೬೫ ಟನ್ಗಳಷ್ಟು ಮೇವು ದಾಸ್ತಾನು ಇದೆ. ಜಾನುವಾರುಗಳಿಗೆ ನೀರಿನ ತೊಟ್ಟಿಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಪಂಚಾಯತ್ ಮಟ್ಟದಲ್ಲಿ ಕಲ್ಪಿಸಲಾಗುತ್ತಿದೆ. ಕೆ.ಸಿ.ವ್ಯಾಲಿ ಮತ್ತು ಯರಗೋಳ ಯೋಜನೆಯಡಿ ಒಟ್ಟು ೧೩೨ ಕೆರೆಗಳಿಗೆ ನೀರು ಹರಿಸಲಾಗುತ್ತಿದ್ದು, ಸಣ್ಣ ನೀರಾವರಿ, ಜಿಲ್ಲಾ ಪಂಚಾಯತ್ ಹಾಗೂ ಕಂದಾಯ ಇಲಾಖೆಯ ವ್ಯಾಪ್ತಿಯ ಕೆರೆಗಳಲ್ಲಿನ ನೀರಿನ ಮಟ್ಟವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು ಎಂದರು.

ಕುಡಿಯುವ ನೀರಿನ ಅಸಮರ್ಪಕ ಹಂಚಿಕೆಯನ್ನು ಸರಿಪಡಿಸಲು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ `ನೀರಿನ ಅದಾಲತ್' ಸಭೆಗಳನ್ನು ಆಯೋಜಿಸಲಾಗುತ್ತಿದೆ. ಅಲ್ಲದೆ, ನೀರಿನ ಬಳಕೆ ಮತ್ತು ಲಭ್ಯತೆಯನ್ನು ಅಳೆಯಲು ೧೯೫ ನಗರ ವಾರ್ಡ್ಗಳು ಹಾಗೂ ೧೫೩೧ ಗ್ರಾಮಗಳಲ್ಲಿ 'ನೀರಿನ ಆಡಿಟ್' ನಡೆಸಲಾಗಿದೆ.

ಜಿಲ್ಲಾಧಿಕಾರಿಗಳು ಮತ್ತು ತಹಸೀಲ್ದಾರ್ಗಳ ಪಿ.ಡಿ ಖಾತೆಯಲ್ಲಿ ಒಟ್ಟು ರೂ. ೧೨೩೬.೪೪ ಲಕ್ಷಗಳ ಅನುದಾನ ಲಭ್ಯವಿದ್ದು, ಕುಡಿಯುವ ನೀರು ಮತ್ತು ವಿಪತ್ತು ನಿರ್ವಹಣೆಯ ತುರ್ತು ಕೆಲಸಗಳಿಗೆ ಬಳಸಿಕೊಳ್ಳಲು ಸೂಚಿಸಲಾಗಿದೆ. ನೀರಿನ ನಿರ್ವಹಣೆಯಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ, ಅಪರ ಪೊಲೀಸ್ ವರಿಷ್ಟಾಧಿಕಾರಿ ಹೆಚ್.ಸಿ. ಜಗದೀಶ್, ಕೃಷಿ ಉಪನಿರ್ದೇಶಕಿ ಮಂಜುಳ, ಎಲ್ಲಾ ತಹಸೀಲ್ದಾರ್ಗಳು, ಎಲ್ಲಾ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಭೂ ವಿಜ್ಞಾನಿ ತಿಪ್ಪೆಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande