ಬೆಂಗಳೂರಿನಲ್ಲಿ ಅಪಾಯಕಾರಿ ಮರದ ಕೊಂಬೆಗಳ ತೆರವು ಕಾರ್ಯಾಚರಣೆ
ಬೆಂಗಳೂರು, 29 ಜೂನ್ (ಹಿ.ಸ.) : ಆ್ಯಂಕರ್ : ಸಾರ್ವಜನಿಕರ ಸುರಕ್ಷತೆಯನ್ನು ಹೆಚ್ಚಿಸುವ ಹಾಗೂ ಸಂಭವನೀಯ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅರಣ್ಯ ವಿಭಾಗವು ರಾಜಾಜಿನಗರ ವಿಭಾಗದಲ್ಲಿ ಒಣ ಹಾಗೂ ಅಪಾಯಕಾರಿ ಮರದ ಕೊಂಬೆಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದೆ. ಈ
branch removal


ಬೆಂಗಳೂರು, 29 ಜೂನ್ (ಹಿ.ಸ.) :

ಆ್ಯಂಕರ್ : ಸಾರ್ವಜನಿಕರ ಸುರಕ್ಷತೆಯನ್ನು ಹೆಚ್ಚಿಸುವ ಹಾಗೂ ಸಂಭವನೀಯ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅರಣ್ಯ ವಿಭಾಗವು ರಾಜಾಜಿನಗರ ವಿಭಾಗದಲ್ಲಿ ಒಣ ಹಾಗೂ ಅಪಾಯಕಾರಿ ಮರದ ಕೊಂಬೆಗಳ ತೆರವು ಕಾರ್ಯಾಚರಣೆಯನ್ನು ಕೈಗೊಂಡಿದೆ.

ಈ ವಿಶೇಷ ಕಾರ್ಯಾಚರಣೆಯಲ್ಲಿ ಪಾದಚಾರಿಗಳು ಮತ್ತು ವಾಹನ ಸವಾರರಿಗೆ ಅಪಾಯ ಉಂಟುಮಾಡುವ ಸಾಧ್ಯತೆ ಇದ್ದ ಒಣಗಿ ದುರ್ಬಲಗೊಂಡ ಮರದ ಕೊಂಬೆಗಳನ್ನು ಗುರುತಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ ತೆರವುಗೊಳಿಸಲಾಯಿತು.

ಮಳೆಗಾಲದಲ್ಲಿ ಬಲವಾದ ಗಾಳಿ ಮತ್ತು ಮಳೆಯಿಂದ ಮರದ ಕೊಂಬೆಗಳು ಮುರಿದು ಬೀಳುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ಇದರಿಂದ ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಯ ರಕ್ಷಣೆಗೆ ನೆರವಾಗುವುದರ ಜೊತೆಗೆ ರಸ್ತೆ ಸಂಚಾರವೂ ಸುಗಮವಾಗಲಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಅರಣ್ಯ ವಿಭಾಗವು ನಗರ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿಯೂ ಅಪಾಯಕಾರಿ ಮರಗಳು ಮತ್ತು ಒಣ ಕೊಂಬೆಗಳನ್ನು ಗುರುತಿಸಿ ಹಂತ ಹಂತವಾಗಿ ಇದೇ ರೀತಿಯ ಸುರಕ್ಷತಾ ಕಾರ್ಯಾಚರಣೆಗಳನ್ನು ಮುಂದುವರಿಸಲಿದೆ ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande