ಕನ್ನಡ ಉಳಿಸಿ–ಬೆಳೆಸುವ ಜವಾಬ್ದಾರಿ ಎಲ್ಲರದ್ದು : ದಿನೇಶ್ ಗುಂಡೂರಾವ್
ಬೆಂಗಳೂರು, 29 ಜೂನ್ (ಹಿ.ಸ.) : ಆ್ಯಂಕರ್ : ಸ್ವಾತಂತ್ರ್ಯ ಉದ್ಯಾನವನದಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಧ್ವಜಸ್ಥಂಭ ಹಾಗೂ ಕುವೆಂಪು ಪ್ರತಿಮೆಯ ನೂತನ ಆವರಣವನ್ನು ಲೋಕಾರ್ಪಣೆ ಮಾಡಿದರು. ಬಳಿಕ ಕನ್ನಡ
ದಿನೇಶ್ ಗುಂಡೂರಾವ್


ಬೆಂಗಳೂರು, 29 ಜೂನ್ (ಹಿ.ಸ.) :

ಆ್ಯಂಕರ್ : ಸ್ವಾತಂತ್ರ್ಯ ಉದ್ಯಾನವನದಲ್ಲಿರುವ ರಾಷ್ಟ್ರಕವಿ ಕುವೆಂಪು ಅವರ ಪ್ರತಿಮೆಗೆ ಮಾಜಿ ಸಚಿವ ದಿನೇಶ್ ಗುಂಡೂರಾವ್ ಪುಷ್ಪನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕನ್ನಡ ಧ್ವಜಸ್ಥಂಭ ಹಾಗೂ ಕುವೆಂಪು ಪ್ರತಿಮೆಯ ನೂತನ ಆವರಣವನ್ನು ಲೋಕಾರ್ಪಣೆ ಮಾಡಿದರು.

ಬಳಿಕ ಕನ್ನಡ ಜನಶಕ್ತಿ ಕೇಂದ್ರ ಆಯೋಜಿಸಿದ್ದ 'ಕುವೆಂಪು ನೆನಪು ಸಭೆ' ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಬೆಳವಣಿಗೆಗಾಗಿ ಸೇವೆ ಸಲ್ಲಿಸುತ್ತಿರುವ ಸಾ.ರಾ. ಗೋವಿಂದು, ಪೊಲೀಸ್ ಮುಖ್ಯ ಪೇದೆ ಎಂ. ಮಹದೇವಸ್ವಾಮಿ ಸೇರಿದಂತೆ ಹಲವು ಗಣ್ಯರನ್ನು ಸನ್ಮಾನಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ದಿನೇಶ್ ಗುಂಡೂರಾವ್, ಸುಮಾರು 12 ವರ್ಷಗಳ ಹಿಂದೆ ಸ್ವಾತಂತ್ರ್ಯ ಉದ್ಯಾನದಲ್ಲಿ ಕುವೆಂಪು ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಇದೀಗ ಸುಂದರವಾದ ನೂತನ ಆವರಣ ನಿರ್ಮಿಸುವ ಮೂಲಕ ಪ್ರತಿಮೆಯ ಸುತ್ತಮುತ್ತಲಿನ ಪ್ರದೇಶವನ್ನು ಇನ್ನಷ್ಟು ಆಕರ್ಷಕಗೊಳಿಸಲಾಗಿದೆ ಎಂದು ಹೇಳಿದರು.

ರಾಜ್ಯದ ವಿವಿಧ ಭಾಗಗಳಿಂದ ಪ್ರತಿನಿತ್ಯ ಸಾವಿರಾರು ಜನರು ಸ್ವಾತಂತ್ರ್ಯ ಉದ್ಯಾನಕ್ಕೆ ಭೇಟಿ ನೀಡುವುದರಿಂದ ಇಲ್ಲಿನ ಪರಿಸರವನ್ನು ಸ್ವಚ್ಛ ಹಾಗೂ ಸುಂದರವಾಗಿ ಕಾಪಾಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಇಲ್ಲಿಗೆ ಬರುವ ಪ್ರತಿಯೊಬ್ಬರಿಗೂ ಕುವೆಂಪು ಅವರ ವ್ಯಕ್ತಿತ್ವ, ಸಾಹಿತ್ಯ ಮತ್ತು ಚಿಂತನೆಗಳ ಮಹತ್ವ ಅರಿವಾಗಬೇಕು. ಅವರ ಕೃತಿಗಳನ್ನು ಓದುವ ಆಸಕ್ತಿ ಜನರಲ್ಲಿ ಬೆಳೆಯಬೇಕು ಎಂದು ಅವರು ತಿಳಿಸಿದರು.

ಕನ್ನಡದ ಪರ ಹೋರಾಟ ನಡೆಸುವುದು ಎಷ್ಟು ಮುಖ್ಯವೋ, ಕನ್ನಡ ಭಾಷೆಯ ಬೆಳವಣಿಗೆಗೆ ಶ್ರಮಿಸುವುದೂ ಅಷ್ಟೇ ಅಗತ್ಯವಾಗಿದೆ ಎಂದು ಅವರು ಹೇಳಿದರು. ಇಂದಿನ ಮಕ್ಕಳಲ್ಲಿ ಕನ್ನಡ ಓದುವ, ಬರೆಯುವ ಹಾಗೂ ಭಾಷೆಯ ಬಗ್ಗೆ ಆಳವಾದ ಆಸಕ್ತಿ ಬೆಳೆಸುವುದು ಕಾಲದ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಇಂದು ಅನೇಕ ಮಕ್ಕಳು ಕನ್ನಡವನ್ನು ಮಾತನಾಡುತ್ತಾರೆ. ಆದರೆ ಕನ್ನಡದಲ್ಲಿ ಓದಲು ಮತ್ತು ಬರೆಯಲು ಅನೇಕರಿಗೆ ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಕನ್ನಡ ಸಾಹಿತ್ಯವನ್ನು ಅಧ್ಯಯನ ಮಾಡುವವರ ಸಂಖ್ಯೆ ಕುಸಿಯುವ ಅಪಾಯವಿದೆ. ಈ ಕುರಿತು ಸರ್ಕಾರ ಮಾತ್ರವಲ್ಲ, ಸಮಾಜದ ಪ್ರತಿಯೊಬ್ಬರೂ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವು ಹಾಗೂ ಬೆಳವಣಿಗೆಗಾಗಿ ಎಲ್ಲರೂ ಕೈಜೋಡಿಸೋಣ, ಎಂದು ದಿನೇಶ್ ಗುಂಡೂರಾವ್ ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande