ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹1.05 ಕೋಟಿ ದೇಣಿಗೆ ನೀಡಿದ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ
ಬೆಂಗಳೂರು, 29 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ (ಕೆಎಸ್ಎಫ್ಐಸಿ) ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹1 ಕೋಟಿ 5 ಲಕ್ಷದ ಚೆಕ್ನ್ನು ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸಲಾಯಿತು. ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲ
ಚೆಕ್ ಹಸ್ತಾಂತರ


ಬೆಂಗಳೂರು, 29 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ (ಕೆಎಸ್ಎಫ್ಐಸಿ) ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹1 ಕೋಟಿ 5 ಲಕ್ಷದ ಚೆಕ್ನ್ನು ಸೋಮವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹಸ್ತಾಂತರಿಸಲಾಯಿತು.

ವಿಧಾನ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಎಸ್ಎಫ್ಐಸಿ ಅಧ್ಯಕ್ಷ ಬೇಲೂರು ಗೋಪಾಲಕೃಷ್ಣ ಅವರು ನಿಗಮದ ಪರವಾಗಿ ₹1.05 ಕೋಟಿ ಮೊತ್ತದ ಚೆಕ್ನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ, ಪ್ರಕೃತಿ ವಿಕೋಪ, ತುರ್ತು ಪರಿಸ್ಥಿತಿ ಹಾಗೂ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಈ ದೇಣಿಗೆಯನ್ನು ನೀಡಲಾಗಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ಸಾರ್ವಜನಿಕ ಸಂಸ್ಥೆಗಳ ಸಹಭಾಗಿತ್ವ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಡಾ. ವಿ. ವೆಂಕಟೇಶ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande