ರಾಜ್ಯ ಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ
ನವದೆಹಲಿ, 29 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷದ ನಾಯಕರಾಗಿ ಸೇವೆ ಮುಂದುವರಿಸುವ ಅವಕಾಶ ದೊರೆತಿರುವುದು ತಮ್ಮ ಪಾಲಿನ ಹೆಮ್ಮೆ ಮತ್ತು ಮಹತ್ತರ ಜವಾಬ್ದಾರಿ ಎಂದು ಹೇಳಿದ್ದಾರೆ. ಪ್ರಮಾಣ ವಚನ ಸ್ವ
ರಾಜ್ಯಸಭಾ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ


ನವದೆಹಲಿ, 29 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷದ ನಾಯಕರಾಗಿ ಸೇವೆ ಮುಂದುವರಿಸುವ ಅವಕಾಶ ದೊರೆತಿರುವುದು ತಮ್ಮ ಪಾಲಿನ ಹೆಮ್ಮೆ ಮತ್ತು ಮಹತ್ತರ ಜವಾಬ್ದಾರಿ ಎಂದು ಹೇಳಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಎಕ್ಸನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ರಾಜ್ಯ ಸಭೆಯಂತಹ ಗೌರವಾನ್ವಿತ ಮೇಲ್ಮನೆಯಲ್ಲಿ ಪ್ರತಿಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸುವ ಅವಕಾಶವನ್ನು ಜನತೆಯ ಪರವಾದ ಧ್ವನಿಯಾಗಿ ಬಳಸಿಕೊಳ್ಳುವುದಾಗಿ ಖರ್ಗೆ ತಿಳಿಸಿದರು.

ಈ ಸಂದರ್ಭದಲ್ಲಿ ಉಪರಾಷ್ಟ್ರಪತಿ ಹಾಗೂ ರಾಜ್ಯ ಸಭೆಯ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಮತ್ತು ಉಪ ಸಭಾಪತಿ ಹರಿವಂಶ್ ಅವರಿಗೆ ಸದನದ ಕಾರ್ಯನಿರ್ವಹಣೆಯಲ್ಲಿ ನೀಡಿದ ನಿರಂತರ ಬೆಂಬಲಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಅದೇ ರೀತಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕ ಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪಕ್ಷದ ಸಂಸದರು, ನಾಯಕರು, ಕಾರ್ಯಕರ್ತರು ಹಾಗೂ ಬೆಂಬಲಿಗರು ತಮ್ಮ ಮೇಲೆ ಇರಿಸಿರುವ ವಿಶ್ವಾಸ ಮತ್ತು ಪ್ರೋತ್ಸಾಹಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು.

ಎಲ್ಲ ರಾಜಕೀಯ ಪಕ್ಷಗಳ ಸದನದ ನಾಯಕರಿಗೆ, ವಿಶೇಷವಾಗಿ ಇಂಡಿಯಾ ಮೈತ್ರಿಕೂಟದ ಸಹೋದ್ಯೋಗಿಗಳು ಹಾಗೂ ಇತರ ಪಕ್ಷಗಳ ಸದಸ್ಯರಿಗೆ ಸಹಕಾರ ಮತ್ತು ಸೌಹಾರ್ದತೆಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಮುಂಬರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಇನ್ನಷ್ಟು ಬಲಿಷ್ಠ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಜನರ ಸಮಸ್ಯೆಗಳು, ಆಶೋತ್ತರಗಳು ಮತ್ತು ಧ್ವನಿಯನ್ನು ಸಂಸತ್ತಿನಲ್ಲಿ ಪ್ರಾಮಾಣಿಕವಾಗಿ ಪ್ರತಿನಿಧಿಸುವುದು ಪ್ರತಿಪಕ್ಷದ ಪ್ರಮುಖ ಕರ್ತವ್ಯವಾಗಿದೆ. ಸರ್ಕಾರವನ್ನು ಹೆಚ್ಚು ಜವಾಬ್ದಾರಿಯುತವಾಗಿಸಲು ರಚನಾತ್ಮಕ ವಿರೋಧದ ಪಾತ್ರವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವ ಸಂಕಲ್ಪವನ್ನು ಖರ್ಗೆ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande