
ಬಳ್ಳಾರಿ, 29 ಜೂನ್ (ಹಿ.ಸ.) :
ಆ್ಯಂಕರ್ : ಶಾಸಕ ಪ್ರದೀಪ್ ಈಶ್ವರ್ ಅವರು ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಕುರಿತು ವೈಯಕ್ತಿಕವಾಗಿ ಟೀಕೆ ಮಾಡಿ, ಸವಾಲು ಹಾಕಿ ಮಾತನಾಡಿ ಅವರ ಅಭಿಮಾನಿಗಳನ್ನು ಪ್ರಚೋದನೆ ಮಾಡುತ್ತಿರುವುದು ಸರಿಯಲ್ಲ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿರುವ ಅವರು, ಶಾಸಕರಾಗಿರುವ ಪ್ರದೀಪ್ ಈಶ್ವರ್ ಅವರು ತಮ್ಮ ಮಾತುಗಳನ್ನು ತಿದ್ದಿಕೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಬೇಕು. ಪ್ರದೀಪ್ ಈಶ್ವರ್ ಅವರು ನಾಲಿಗೆಯನ್ನು ಹಿಡಿತದಲ್ಲಿಟ್ಟುಕೊಳ್ಳಬೇಕು. ಶಾಸಕ ಪ್ರದೀಪ್ ಈಶ್ವರ್ ಅವರು ಬಹಿರಂಗವಾಗಿ ಕ್ಷಮೆ ಕೋರಬೇಕು. ಇಲ್ಲವಾದಲ್ಲಿ ಎಚ್.ಡಿ. ಕುಮಾರಸ್ವಾಮಿ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್