
ಹಾವೇರಿ, 29 ಜೂನ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಹಾವೇರಿ ಹಾಗೂ ಧಾರವಾಡ ಜಿಲ್ಲಾ ಘಟಕಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗಾಗಿ ಹಾವೇರಿ ಜಿಲ್ಲಾ ಗುರುಭವನದಲ್ಲಿ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಯಿತು.
ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಕೇಶವ ವಿ. ಬಿ. ಉದ್ಘಾಟಕರಾಗಿ ಭಾಗವಹಿಸಿ ಮಾತನಾಡಿದರು. ಪರಿಸರ ಸಂರಕ್ಷಣೆಯ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವಲ್ಲಿ ಇಂತಹ ಸೃಜನಾತ್ಮಕ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಡಾ. ಬಿ. ಎಂ. ಬೇವಿನಮರದ, ಡಾ. ಗೀತಾ ಸುತ್ತಕೋಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಹಸಿರು ಅಭಿವೃದ್ಧಿ, ಜಲ ಸಂರಕ್ಷಣೆ ಹಾಗೂ ಪ್ರಕೃತಿ ಪ್ರೇಮದ ಸಂದೇಶ ಸಾರುವ ಚಿತ್ರಗಳನ್ನು ರಚಿಸುವ ಮೂಲಕ ಗಮನ ಸೆಳೆದರು. ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಕುರಿತು ಮಕ್ಕಳಲ್ಲಿ ಅರಿವು ಮತ್ತು ಹೊಣೆಗಾರಿಕೆಯನ್ನು ಬೆಳೆಸುವ ಉದ್ದೇಶದಿಂದ ಯಶಸ್ವಿಯಾಗಿ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.