ಗದಗ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ಸಿದ್ಧತೆ, ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ
ಗದಗ, 29 ಜೂನ್ (ಹಿ.ಸ.) : ಆ್ಯಂಕರ್ : ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) ವಿಬಿ-ಜಿ ರಾಮ್ (ಜಿ) ಯೋಜನೆ ದೇಶಾದ್ಯಂತ ಜುಲೈ 1ರಿಂದ ಜಾರಿಗೆ ಬರಲಿದ್ದು, ಗದಗ ಜಿಲ
ಫೋಟೋ


ಗದಗ, 29 ಜೂನ್ (ಹಿ.ಸ.) :

ಆ್ಯಂಕರ್ : ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಅಜೀವಿಕ ಮಿಷನ್ (ಗ್ರಾಮೀಣ) ವಿಬಿ-ಜಿ ರಾಮ್ (ಜಿ) ಯೋಜನೆ ದೇಶಾದ್ಯಂತ ಜುಲೈ 1ರಿಂದ ಜಾರಿಗೆ ಬರಲಿದ್ದು, ಗದಗ ಜಿಲ್ಲೆಯಲ್ಲಿಯೂ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸಿದ್ಧತೆಗಳು ಆರಂಭಗೊಂಡಿವೆ.

ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವಿಬಿ-ಜಿ ರಾಮ್ (ಜಿ) ಯೋಜನೆ ಕುರಿತು ಜಿಲ್ಲೆಯ ವಿವಿಧ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಆಯೋಜಿಸಲಾಯಿತು. ರಾಜ್ಯ ಆಯುಕ್ತಾಲಯದಿಂದ ತರಬೇತಿ ಪಡೆದಂತ ಮಾಸ್ಟರ್ ಟ್ರೈನರ್ಗಳಾದ ಸಂತೋಷ ಪಾಟೀಲ್, ಚಂದ್ರು ಲಮಾಣಿ ಅವರಿಂದ ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಅವರ ನೇತೃತ್ವದಲ್ಲಿ ತರಬೇತಿ ನೀಡಲಾಯಿತು.

ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ ಅವರು, ಜಿಲ್ಲೆಯಲ್ಲಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ರೂಪರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಗ್ರಾಮೀಣ ಅಕುಶಲ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಯೋಜನೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಕುರಿತು ತರಬೇತಿ ಪಡೆದ ಮಾಸ್ಟರ್ ಟ್ರೈನರ್ ಚಂದ್ರು ಲಮಾಣಿ ಮಾತನಾಡಿ ವಿಬಿ-ಜಿ ರಾಮ್ (ಜಿ) ಯೋಜನೆಯಡಿ ಸ್ವಯಂಪ್ರೇರಿತವಾಗಿ ಅಕುಶಲ ಕೆಲಸಕ್ಕಾಗಿ ಬೇಡಿಕೆ ಸಲ್ಲಿಸುವ ಗ್ರಾಮೀಣ ಕುಟುಂಬಗಳ ವಯಸ್ಕ ಸದಸ್ಯರಿಗೆ ಒಂದು ಆರ್ಥಿಕ ವರ್ಷದಲ್ಲಿ 125 ದಿನಗಳ ಕಡ್ಡಾಯ ಉದ್ಯೋಗ ಖಾತ್ರಿ ನೀಡಲಾಗುತ್ತಿದೆ. ಯೋಜನೆಯು ವಿಕಸಿತ ಗ್ರಾಮ ಪಂಚಾಯಿತಿ ಯೋಜನೆ ಮೂಲಕ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಕಾಮಗಾರಿಗಳನ್ನು ಆಯ್ಕೆ ಮಾಡಿ ಅನುಷ್ಠಾನಗೊಳಿಸುವ ವ್ಯವಸ್ಥೆಯನ್ನು ಒಳಗೊಂಡಿದೆ. ಗ್ರಾಮ ಪಂಚಾಯಿತಿಗಳಿಗೆ ಕುಟುಂಬಗಳ ನೋಂದಣಿ, ಉದ್ಯೋಗ ಅರ್ಜಿ ಸ್ವೀಕಾರ, ಕಾಮಗಾರಿಗಳ ನಿರ್ವಹಣೆ ಹಾಗೂ ದಾಖಲೆಗಳ ಸಂರಕ್ಷಣೆ ಸೇರಿದಂತೆ ಪ್ರಮುಖ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂದರು..

ನರಗುಂದ ತಾಲೂಕ ಪಂಚಾಯತ ಸಹಾಯಕ ನಿರ್ದೇಶಕರಾದ ( ಗ್ರಾ ಊ) ಹಾಗೂ ಮಾಸ್ಟರ್ ಟ್ರೈನರ್ ಆದಂತಹ ಸಂತೋಷ ಪಾಟೀಲ ಅವರು ಮಾತನಾಡಿ ಜಲ ಭದ್ರತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಜೀವನೋಪಾಯ ಸೌಲಭ್ಯಗಳು ಹಾಗೂ ಹವಾಮಾನ ವೈಪರೀತ್ಯ ಶಮನ ಕಾಮಗಾರಿಗಳಿಗೆ ಯೋಜನೆಯಲ್ಲಿ ಆದ್ಯತೆ ನೀಡಲಾಗಿದೆ. ಜೊತೆಗೆ ಸಮಗ್ರ ಡಿಜಿಟಲ್ ವ್ಯವಸ್ಥೆಯ ಮೂಲಕ ಆಡಳಿತ, ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ನಾಗರಿಕರ ಪಾಲ್ಗೊಳ್ಳುವಿಕೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ ಎಂದರು, 2047ರ ವಿಕಸಿತ ಭಾರತದ ಕನಸಿಗೆ ಬಲ ಭಾರತ ಸ್ವಾತಂತ್ರ್ಯದ ಶತಮಾನೋತ್ಸವದ ವೇಳೆಗೆ, ಅಂದರೆ 2047ರೊಳಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ “ವಿಕಸಿತ ಭಾರತ @2047” ಗುರಿ ಸಾಧನೆಗೆ ಈ ಯೋಜನೆ ಮಹತ್ವದ ಹೆಜ್ಜೆಯಾಗಿದ್ದು, ಗ್ರಾಮೀಣ ಉದ್ಯೋಗ ಭದ್ರತೆ ಮತ್ತು ಜೀವನೋಪಾಯ ವೃದ್ಧಿಗೆ ಹೊಸ ದಿಕ್ಕು ನೀಡಲಿದೆ ಎಂದು ತಿಳಿಸಿದರು..

ಕಾರ್ಯಾಗಾರದಲ್ಲಿ ಮುಂಡರಗಿ,ರೋಣ, ಗಜೇಂದ್ರಗಡ ನರಗುಂದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕರು, ಬಿಎಪ್ ಟಿ ಗಳು, ಜಿಕೆಎಂ ಗಳು ಹಾಗೂ ತಾಲೂಕ ಪಂಚಾಯತಿ ನರೇಗಾ ಸಿಬ್ಬಂದಿಗಳು ಹಾಗೂ ಜಿಲ್ಲಾ ಸಿಬ್ಬಂದಿಗಳು ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande