
ಬೆಂಗಳೂರು, 29 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದ ನಾನಾ ಭಾಗಗಳಲ್ಲಿ ಸೋಮವಾರ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಗಂಟೆಗೆ ವೇಗವಾಗಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಭಾರಿ ಮಳೆ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ನದಿ, ಹೊಳೆ ಹಾಗೂ ಜಲಾಶಯಗಳ ಸಮೀಪ ವಾಸಿಸುವವರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯುವುದನ್ನು ತಪ್ಪಿಸಬೇಕು ಹಾಗೂ ಅನಗತ್ಯವಾಗಿ ಹೊರಗಡೆ ಓಡಾಟ ಮಾಡದಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ರೈತರು ಮತ್ತು ಮೀನುಗಾರರು ಸಹ ಹವಾಮಾನ ಮುನ್ಸೂಚನೆ ಗಮನಿಸಿ ತಮ್ಮ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.