ಧಾರವಾಡದಲ್ಲಿ ಎಸ್ಐಆರ್ ಜಾಗೃತಿ ಜಾಥಾ
ಧಾರವಾಡ, 29 ಜೂನ್ (ಹಿ.ಸ.) : ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಅಂಗವಾಗಿ ಧಾರವಾಡದಲ್ಲಿ ಬೃಹತ್ ಮತದಾರರ ಜಾಗೃತಿ ಜಾಥಾ ನಡೆಯಿತು. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವ
SIR awareness rally in Dharwad


ಧಾರವಾಡ, 29 ಜೂನ್ (ಹಿ.ಸ.) :

ಆ್ಯಂಕರ್ : ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಅಂಗವಾಗಿ ಧಾರವಾಡದಲ್ಲಿ ಬೃಹತ್ ಮತದಾರರ ಜಾಗೃತಿ ಜಾಥಾ ನಡೆಯಿತು.

ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆಯ ಧಾರವಾಡ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸ್ನೇಹಲ್ ಆರ್. ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಭುವನೇಶ್ವರ ಪಾಟೀಲ ಜಾಥಾಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಸ್ನೇಹಲ್ ಆರ್., ದೋಷರಹಿತ ಹಾಗೂ ನಿಖರವಾದ ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಬಲವಾದ ಅಡಿಪಾಯವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಎಣಿಕೆ (ಎನ್ಯುಮರೇಷನ್) ನಮೂನೆಯನ್ನು ಕಡ್ಡಾಯವಾಗಿ ಭರ್ತಿ ಮಾಡಿ ಸಲ್ಲಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಭುವನೇಶ್ವರ ಪಾಟೀಲ ಮಾತನಾಡಿ, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಪ್ರಜಾಪ್ರಭುತ್ವವನ್ನು ಮತ್ತಷ್ಟು ಸದೃಢಗೊಳಿಸುವ ಮಹತ್ವದ ಕಾರ್ಯವಾಗಿದೆ. ರಾಜಕೀಯ ಪಕ್ಷಗಳು, ಯುವ ಮತದಾರರು, ಬೂತ್ ಮಟ್ಟದ ಅಧಿಕಾರಿಗಳು, ಬಿಎಲ್ಒಗಳು ಹಾಗೂ ಸಾರ್ವಜನಿಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.

ಜಾಗೃತಿ ಜಾಥಾವು ಪಾಲಿಕೆ ಕಚೇರಿಯಿಂದ ಆರಂಭವಾಗಿ ಮಹಾರಾಣಾ ಪ್ರತಾಪ ವೃತ್ತ, ಸ್ವಾಮಿ ವಿವೇಕಾನಂದ ವೃತ್ತ ಹಾಗೂ ಕೆಸಿಸಿ ಬ್ಯಾಂಕ್ ಮಾರ್ಗವಾಗಿ ಸಾಗುತ್ತ ಕಲಾಭವನ ಆವರಣದಲ್ಲಿ ಸಮಾಪ್ತಿಯಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ, ಮತದಾರರ ನೋಂದಣಾಧಿಕಾರಿ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ, ಸಹಾಯಕ ಅಧಿಕಾರಿ ಉಮೇಶ ಸವಣೂರ, ಪಾಲಿಕೆಯ ವಲಯ ಕಚೇರಿ ಆಯುಕ್ತರಾದ ಅರವಿಂದ ಜಮಖಂಡಿ, ಶಂಕರ ಪಾಟೀಲ ಹಾಗೂ ರಮೇಶ್ ನ್ಯೂಲ್ವಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande