ಕೊಪ್ಪಳ ಅಧಿಕಾರಿ, ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ
ಕೊಪ್ಪಳ, 29 ಜೂನ್ (ಹಿ.ಸ.) : ಆ್ಯಂಕರ್ : ವಿಕಸಿತ ಭಾರತ ಗ್ಯಾರಂಟಿ ರೋಜಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ) ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊಪ್ಪಳ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಜುಲೈ
ಕೊಪ್ಪಳ : ಅಧಿಕಾರಿ, ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ


ಕೊಪ್ಪಳ, 29 ಜೂನ್ (ಹಿ.ಸ.) :

ಆ್ಯಂಕರ್ : ವಿಕಸಿತ ಭಾರತ ಗ್ಯಾರಂಟಿ ರೋಜಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ) ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಕೊಪ್ಪಳ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಜುಲೈ 1 ರಿಂದ ದೇಶದಾದ್ಯಂತ ಜಾರಿಯಾಗಲಿರುವ ವಿಬಿ-ಜಿ ರಾಮ್ ಜಿ ಯೋಜನೆನ್ನು ಅನುಷ್ಠಾನಿಸುವ ಕುರಿತಾಗಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಕಾರಟಗಿ ತಾ.ಪಂ (ಗ್ರಾಉ) ಸಹಾಯಕ ನಿರ್ದೇಶಕರಾದ ವೈ.ವನಜಾ, ಕುಷ್ಟಗಿ ತಾ.ಪಂ (ಗ್ರಾಉ) ಸಹಾಯಕ ನಿರ್ದೇಶಕರಾದ ನಿಂಗನಗೌಡ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶಂಶೀರ್ ಅಲಿ ಅವರು ಈ ತರಬೇತಿಯಲ್ಲಿ ಯೋಜನೆ ಕಾರ್ಯವೈಖರಿ ವಿಧಾನಗಳ ಕುರಿತು ಪಿಪಿಟಿ ಮುಖಾಂತರ ಮಾಹಿತಿ ವಿವರಿಸಿದರು.

ತರಬೇತಿಯಲ್ಲಿ ಅನುಷ್ಠಾನ ಇಲಾಖೆಗಳಾದ ಕೃಷಿ, ಅರಣ್ಯ, ತೋಟಗಾರಿಕೆ, ರೇಷ್ಮ ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ತಾ.ಪಂ ವಿವಿಧ ವಿಭಾಗಗಳ ಸಹಾಯಕ ನಿರ್ದೇಶಕರು, ಜಿ.ಪಂ ಎಡಿಪಿಸಿ, ಜಿಲ್ಲಾ ಐಇಸಿ ಸಂಯೋಜಕರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಪಂಚಾಯತಿ ಮತ್ತು ತಾಲೂಕಾ ಪಂಚಾಯತಿಯ ನರೇಗಾ ಸಿಬ್ಬಂದಿಗಳು, ತಾಂತ್ರಿಕ ಸಹಾಯಕರುಗಳು (ಗ್ರಾಮ ಪಂಚಾಯತ & ಅನುಷ್ಠಾನ, ಇಲಾಖೆ), ಕಂಪ್ಯೂಟರ್ ಆಪರೇಟರ್ಗಳು, ಬಿ.ಎಫ್.ಟಿಗಳು, ಗ್ರಾಮ ಕಾಯಕ ಮಿತ್ರರು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande