
ಮಂಡ್ಯ, 29 ಜೂನ್ (ಹಿ.ಸ.) :
ಆ್ಯಂಕರ್ : ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆಯ ವಿರುದ್ಧದ ಅಂತರರಾಷ್ಟ್ರೀಯ ದಿನಾಚರಣೆ ಅಂಗವಾಗಿ ಮಂಡ್ಯ ನಗರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಜಾಗೃತಿ ಜಾಥಾವನ್ನು ಆಯೋಜಿಸಲಾಯಿತು.
ನಗರದ ಪ್ರಮುಖ ರಸ್ತೆಗಳಲ್ಲಿ ನಡೆದ ಜಾಗೃತಿ ಜಾಥಾಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿ.ಜೆ. ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು. ಯುವಜನತೆ ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಜಾಥಾದಲ್ಲಿ ಅಪರ ಪೊಲೀಸ್ ಅಧೀಕ್ಷಕ ತಿಮ್ಮಯ್ಯ ಸಿ.ಇ., ಮಂಡ್ಯ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ವಿವಿಧ ಶಾಲಾ–ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು.
ಜಾಗೃತಿ ಜಾಥಾದ ಮೂಲಕ ಮಾದಕ ವಸ್ತುಗಳ ದುರುಪಯೋಗವನ್ನು ತಡೆಗಟ್ಟುವ ಸಂದೇಶವನ್ನು ಸಾರ್ವಜನಿಕರಿಗೆ ತಲುಪಿಸಲಾಯಿತು. ಸಮಾಜವನ್ನು ಮಾದಕ ವಸ್ತುಗಳ ಮುಕ್ತವಾಗಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.