
ಕೊಪ್ಪಳ, 03 ಜೂನ್ (ಹಿ.ಸ.) :
ಆ್ಯಂಕರ್ : ಯಲಬುರ್ಗಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮ)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿಯ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಆನ್ಲೈನ್ ಮೊದಲ ಸುತ್ತಿನ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದಿರುವ ಸೀಟುಗಳ ಭರ್ತಿಗಾಗಿ ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆಗಸ್ಟ್ 31ರೊಳಗೆ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದು. ವಿವಿಧ ತಾಂತ್ರಿಕ ವೃತ್ತಿಗಳಿಗೆ ಎಸ್ಎಸ್ಎಲ್ಸಿ ಉತ್ತೀರ್ಣರಾದ ಹಾಗೂ 14 ವರ್ಷ ಮೇಲ್ಪಟ್ಟ ವಯೋಮಿತಿಯುಳ್ಳ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಯಲಬುರ್ಗಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ಮಹಿಳಾ ಸಂಸ್ಥೆಯಾಗಿರುವುದರಿಂದ ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜೂನ್ 4 ರೊಳಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗಾಗಿ ಜೂನ್ 5ರಂದು ಸಂಸ್ಥೆಯ ಆವರಣದಲ್ಲಿ ಸಮಾಲೋಚನೆ (ಕೌನ್ಸೆಲಿಂಗ್) ನಡೆಸಲಾಗುತ್ತಿದ್ದು, ಅರ್ಜಿ ಸಲ್ಲಿಸಿದ ಎಲ್ಲ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನಿಗದಿತ ದಿನಾಂಕದಂದು ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರ್ಕಾರಿ ಅಥವಾ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆಗಳ ಪ್ರಾಚಾರ್ಯರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಯಲಬುರ್ಗಾದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್