ಇಂಧನ ಉಳಿತಾಯಕ್ಕೆ ಸಚಿವರ ಮಾದರಿ ನಡೆ
ಒಂದೇ ಕಾರಿನಲ್ಲಿ ಕ್ಯಾಬಿನೆಟ್ ಸಭೆಗೆ ಆಗಮಿಸಿದ ಮೂವರು ಕೇಂದ್ರ ಸಚಿವರು
ಚವ್ಹಾಣ


ನವದೆಹಲಿ, 03 ಜೂನ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಹಿನ್ನೆಲೆ ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಮಿತವ್ಯಯ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆ ಸ್ಪಂದನೆ ವ್ಯಕ್ತವಾಗುತ್ತಿದೆ. ಇದರ ಭಾಗವಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಹಾಗೂ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ಅವರು ಬುಧವಾರ ಒಂದೇ ಕಾರಿನಲ್ಲಿ ಕ್ಯಾಬಿನೆಟ್ ಸಭೆಗೆ ಆಗಮಿಸಿದರು.

ಸಭೆಗೆ ಆಗಮಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವರಾಜ್ ಸಿಂಗ್ ಚೌಹಾಣ್, ಪ್ರಧಾನಿ ಮೋದಿ ದೇಶದ ಜನತೆಗೆ ಅನಗತ್ಯ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ಹೇಳಿದರು.

ಈ ಕರೆಗೆ ಸ್ಪಂದನೆಯಾಗಿ ತಾವು, ಸಿ.ಆರ್. ಪಾಟೀಲ್ ಹಾಗೂ ಜಿ. ಕಿಶನ್ ರೆಡ್ಡಿ ಕಾರ್ಪೂಲಿಂಗ್ ಮೂಲಕ ಸಭೆಗೆ ಬಂದಿದ್ದೇವೆ ಎಂದು ತಿಳಿಸಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಇಂಧನ ಉಳಿತಾಯ ಅತ್ಯಂತ ಅಗತ್ಯವಾಗಿದೆ. ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಳಸಬೇಕು ಹಾಗೂ ಇಂಧನ ಸಂರಕ್ಷಣೆಗೆ ಒತ್ತು ನೀಡಬೇಕು ಎಂದು ಚೌಹಾಣ್ ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande