
ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಮಧ್ಯಾಹ್ನದ ಬಳಿಕ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ರಾಜ್ಯದ ನಾನಾ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯನ್ನೂ ಇಲಾಖೆ ಸೂಚಿಸಿದೆ.
ವಿಶೇಷವಾಗಿ ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ಹವಾಮಾನದಲ್ಲಿ ಏರುಪೇರು ಕಂಡುಬರುವ ಸಾಧ್ಯತೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು ಹಾಗೂ ಮರಗಳ ಕೆಳಗೆ ನಿಲ್ಲುವುದನ್ನು ತಪ್ಪಿಸುವಂತೆ ಹವಾಮಾನ ತಜ್ಞರು ಸಲಹೆ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.