ಮುಖ್ಯಮಂತ್ರಿ ಬದಲಾವಣೆ ಮಾತ್ರ ಸಾಕಾಗದು ; ಆಡಳಿತದ ದಿಕ್ಕು ಬದಲಾಗಬೇಕು : ಆರ್. ಅಶೋಕ್
ಬೆಂಗಳೂರು, 03 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅಭಿನಂದನೆ ಸಲ್ಲಿಸಿದ್ದು, ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದ್ದಾರೆ. ಎಕ್ಸನಲ್ಲ
ಅಶೋಕ


ಬೆಂಗಳೂರು, 03 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅಭಿನಂದನೆ ಸಲ್ಲಿಸಿದ್ದು, ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತಕ್ಕಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದ್ದಾರೆ.

ಎಕ್ಸನಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮುಖ್ಯಮಂತ್ರಿ ಬದಲಾವಣೆಯಿಂದ ಮಾತ್ರ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ ಎಂಬುದು ಕಹಿ ಸತ್ಯ ಎಂದು ಹೇಳಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರ, ವರ್ಗಾವಣೆ ದಂಧೆ, ಕಮಿಷನ್ ಸಂಸ್ಕೃತಿ ಹಾಗೂ ಆಡಳಿತ ವೈಫಲ್ಯಗಳಿಂದ ರಾಜ್ಯವನ್ನು ಸಂಕಷ್ಟಕ್ಕೆ ತಳ್ಳಿದ ಸರ್ಕಾರದ ಮುಖ್ಯಸ್ಥರು ಮಾತ್ರ ಬದಲಾಗಿದ್ದಾರೆ. ಆದರೆ ಸರ್ಕಾರದ ಮನಸ್ಥಿತಿ ಮತ್ತು ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆಯ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

ಜನರು ನಾಯಕತ್ವ ಬದಲಾವಣೆಗಿಂತ ಹೆಚ್ಚಾಗಿ ಆಡಳಿತದ ದಿಕ್ಕು ಮತ್ತು ಸರ್ಕಾರದ ಆದ್ಯತೆಗಳು ಬದಲಾಗುವ ನಿರೀಕ್ಷೆ ಹೊಂದಿದ್ದರು. ಆದರೆ ನೂತನ ಸಚಿವ ಸಂಪುಟವನ್ನು ಗಮನಿಸಿದಾಗ, ರಾಜ್ಯವನ್ನು ದುಸ್ಥಿತಿಗೆ ತಳ್ಳಿದ ಅದೇ ಹಳೆಯ ಮುಖಗಳು ಮತ್ತೆ ಅಧಿಕಾರದ ಕೇಂದ್ರದಲ್ಲಿರುವುದು ಕಂಡುಬರುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.

ರಾಜ್ಯವನ್ನು ಲೂಟಿ ಮಾಡಿದವರು, ಅಭಿವೃದ್ಧಿಯನ್ನು ಹಿಮ್ಮೆಟ್ಟಿಸಿದವರು ಹಾಗೂ ಜನರ ವಿಶ್ವಾಸ ಕಳೆದುಕೊಂಡವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಹೀಗಾಗಿ ಇದು ಹೊಸ ಸರ್ಕಾರವಲ್ಲ, ಹಳೆಯ ಸರ್ಕಾರದ ಹೊಸ ಮಾರುವೇಷ ಮಾತ್ರ ಎಂಬ ಭಾವನೆ ಜನರಲ್ಲಿ ಮೂಡಿರುವುದು ಆಶ್ಚರ್ಯದ ಸಂಗತಿಯಲ್ಲ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಬದಲಾಗುವುದರಿಂದ ಮಾತ್ರ ರಾಜ್ಯದ ಪರಿಸ್ಥಿತಿ ಬದಲಾಗುವುದಿಲ್ಲ. ಭ್ರಷ್ಟಾಚಾರ, ಅಧಿಕಾರದ ದುರುಪಯೋಗ ಮತ್ತು ಜನವಿರೋಧಿ ರಾಜಕಾರಣವನ್ನು ಬದಿಗೊತ್ತಿ, ಸಾಮಾನ್ಯ ಜನರ ಪರವಾದ ಆಡಳಿತ ನೀಡುವ ಇಚ್ಛಾಶಕ್ತಿ ಇದ್ದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಜನತೆ ಈಗ ಭರವಸೆಗಳಿಗಿಂತ ಫಲಿತಾಂಶಗಳನ್ನು ನೋಡಲು ಬಯಸುತ್ತಿದ್ದಾರೆ. ಮಾತುಗಳಿಗಿಂತ ಕಾರ್ಯವನ್ನು, ಪ್ರಚಾರಕ್ಕಿಂತ ಪರಿಣಾಮಕಾರಿ ಆಡಳಿತವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ನೂತನ ಮುಖ್ಯಮಂತ್ರಿಗಳ ಮುಂದೆ ಅವಕಾಶಗಳ ಪರ್ವತವಿಲ್ಲ; ತಮ್ಮದೇ ಸರ್ಕಾರದ ಮೂರು ವರ್ಷಗಳ ವೈಫಲ್ಯಗಳ ಅವಶೇಷಗಳಿವೆ. ಕಳೆದ ಮೂರು ವರ್ಷಗಳ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಮುರಿದ ಭರವಸೆಗಳ ಕರಿನೆರಳು ಅವರನ್ನು ಪ್ರತಿ ಹೆಜ್ಜೆಯಲ್ಲೂ ಹಿಂಬಾಲಿಸಲಿದೆ ಎಂದು ಅಶೋಕ್ ಟೀಕಿಸಿದ್ದಾರೆ.

ತಮ್ಮದೇ ಪಕ್ಷದ ಸರ್ಕಾರ ಬಿತ್ತಿರುವ ಮುಳ್ಳುಗಳ ಮೇಲೆಯೇ ನೂತನ ಮುಖ್ಯಮಂತ್ರಿ ಆಡಳಿತದ ಪಯಣ ಆರಂಭಿಸಬೇಕಾಗಿದೆ. ಕುಸಿದ ಆಡಳಿತದ ಅವಶೇಷಗಳ ಮೇಲೆ ಹೊಸ ಸರ್ಕಾರ ಕಟ್ಟುವುದು ಸುಲಭವಲ್ಲ. ಮುಖ್ಯಮಂತ್ರಿ ಬದಲಾಗಿರಬಹುದು, ಆದರೆ ಕಳೆದ ಮೂರು ವರ್ಷಗಳ ಕಹಿ ಅನುಭವವನ್ನು ಜನತೆ ಇನ್ನೂ ಮರೆತಿಲ್ಲ. ಮುಖ್ಯಸ್ಥರು ಮಾತ್ರ ಬದಲಾದ ಈ ಸರ್ಕಾರದಿಂದ ಕನ್ನಡಿಗರು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ಆರ್. ಅಶೋಕ್ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande